ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ್ ಶೆಟ್ಟಿ

106.2K Views 11 Feb 2025

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಉಳಿದಂತೆ ಸಮಿತಿ ಸದಸ್ಯರಾಗಿ ಪ್ರಧಾನ ಅರ್ಚಕರಾದ ವೇ.ಮೂ.ಮಹೇಶ್ ಭಟ್,ದೇವಿಪ್ರಸಾದ್ ಪೂಂಜಾ ಬರಂಗರೆ,
ಸುಧೀರ್ ಕುಮಾರ್, ಕೆ.ಕಾನ್ಸಲೆ,ಕೆ.ಮೋಹನದಾಸ್ ಪೂಜಾರಿ,ನವೀನ್ ಕುಮಾರ್ ಪಣೋಲಿಬೈಲ್, ಅಣ್ಣುನಾಯ್ಕ್ ನಗ್ರಿ,ಸುಜಾತಗಣೇಶ್ ಶೆಟ್ಟಿ,ಬೇಬಿ ಯೋಗೀಶ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.
ನೂತನ ವ್ಯವಸ್ಥಾಪನಾ ಸಮಿತಿ ಸೋಮವಾರ ದೇವಳದಲ್ಲಿ ಅಧಿಕಾರ ಸ್ವೀಕರಿಸಿದೆ.ಈ ಸಂದರ್ಭ ದೇವಳದ ಆಡಳಿತಾಧಿಕಾರೊಯಾಗಿದ್ದ ತಾರನಾಥ ಸಾಲಿಯಾನ್ ಪಿ.,ಕಾರ್ಯನಿರ್ವಹಣಾಧಿಕಾರಿ ಪ್ರವೀಣ್,ವ್ಯವಸ್ಥಾಪನಾ ಸಮಿತಿಯ ಮಾಜಿ‌ಅಧ್ಯಕ್ಷ ಎ.ಸಿ.ಭಂಡಾರಿ,ಸಜೀಪಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ಅಧ್ಯಕ್ಷ ಸಂಜೀವಪೂಜಾರಿ ಬೊಳ್ಳಾಯಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top