ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲಾ ಸದಸ್ಯರಿಗೆ ತಲಾ 5ಲಕ್ಷ ರುಪಾಯಿ ಆರೋಗ್ಯ ವಿಮೆ ನೀಡುವಂತೆ ಒತ್ತಾಯ.

91.9K Views 25 Mar 2025

ಮಂಗಳೂರು – ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ 5 ಲಕ್ಷ ರುಪಾಯಿ ಆರೋಗ್ಯ ವಿಮೆ ಘೋಷಿದ್ದು,ಇದನ್ನು ಎಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸಿಗುವಂತೆ ಮಾಡಬೇಕೆಂದು ಅಶೋಕ್ ಶೆಟ್ಟಿ ಬಿ.ಯನ್ ಅವರು ಕಾರ್ಯನಿರತ ಪತ್ರಕರ್ತರ ಸಂಘದ ಮಾಸಿಕ ಸಭೆಯಲ್ಲಿ ಪ್ರಸ್ತಾಪಿಸಿದರು.

ಅದರಂತೆ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆಯವರು ಮಾರ್ಚ್ 25ರಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಆರೋಗ್ಯ ವಿಮೆಯನ್ನು ಎಲ್ಲಾ ಪತ್ರಕರ್ತರಿಗೆ ಅನ್ವಯಿಸುವಂತೆ ಜಾರಿಗೊಳಿಸಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ.ಪ್ರಭಾಕರ್ ಅವರಿಗೆ ಒತ್ತಾಯಿಸಿದರು. ಕೆ.ವಿ.ಪ್ರಭಾಕರ್ ಅವರನ್ನು ಭೇಟಿಯಾಗಿ ಅಶೋಕ್ ಶೆಟ್ಟಿ ಬಿ. ಎನ್.ಅವರು ಕೂಡಾ ಈ ಬಗ್ಗೆ ಗಮನ ಸೆಳೆದರು. ಈ ಬಗ್ಗೆ ಪರಿಶೀಲಿಸುವುದಾಗಿ ಕೆ. ವಿ.ಪ್ರಭಾಕರ್ ಹೇಳಿದರು

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top