ವಕೀಲರ ಸಂಘ ಬಂಟ್ವಾಳ: ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಮರು ಆಯ್ಕೆ. ಪ್ರತಿಸ್ಪರ್ಧಿ ರಾಜೇಶ್ ಬೊಳ್ಳುಕಲ್ಲು ಪರಾಭವ.

114K Views 4 May 2025

(ಜಯಾನಂದ ಪೆರಾಜೆ ಬಂಟ್ವಾಳ)
ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ. ಸ್ಪರ್ಧೆ ಮಾಡಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಎರಡನೇ ಬಾರಿಗೆ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ. ರವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ.ಪ್ರತಿಸ್ಪರ್ಧಿಯಾಗಿ ಪೈಪೋಟಿ ನೀಡಿದ ರಾಜೇಶ್ ಬೊಳ್ಳುಕಲ್ಲು 95 ಮತಗಳನ್ನು ಪಡೆಯಲು ಸಮರ್ಥರಾದರು. ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದರು ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ಉಪ ಚುನಾವಣಾಧಿಕಾರಿಗಳಾಗಿ ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರ ಮೇಲುಸ್ತುವಾರಿಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top