ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಗೆ ಯುವ ರೆಡ್‌ಕ್ರಾಸ್ ಪ್ರೇರಣೆ -ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ

119.8K Views 9 May 2025

ಮಂಗಳೂರು : ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್‌ಕ್ರಾಸ್ ಸದಸ್ಯರಿಗೆ ಮೂರು ದಿನಗಳ ಪ್ರೇರಣಾ ಶಿಬಿರ ಗುರುವಾರ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಉದ್ಘಾಟನೆಗೊಂಡಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ‘
ವಿದ್ಯಾರ್ಥಿಗಳು ಜೀವನದಲ್ಲಿ ಕರುಣೆ, ಸೇವಾ ಮನೋಭಾವ ಅಳವಡಿಸಿಕೊಳ್ಳಬೇಕು. ಮಾನವೀಯ ಸೇವೆಗೆ ಒಂದಷ್ಟು ಸಮಯ ಮೀಸರಿಲಿಸಬೇಕು. ಸವಾಜ ಸೇವೆ ಹಾಗೂ ವಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಲು ಯುವ ರೆಡ್‌ಕ್ರಾಸ್ ಪ್ರೇರಣೆ ನೀಡುತ್ತದೆ ಎಂದರು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿ, ಉದ್ಯಮಿ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಉಡುಪಿ ಘಟಕದ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಗಳಾದ ಯೋಗೀಶ್ ಶ್ಯಾನ್‌ಭೋಗ್, ಸಂತೋಷ್ ಪಿಂಟೊ, ದೀಕ್ಷಿತಾ, ಡಾ.ಅನುರಾಧ ಕುರುಂಜಿ ಉಪಸ್ಥಿತರಿದ್ದರು.
ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ನೋಡಲ್ ಆಫೀಸರ್ ಡಾ.ಗಾಯತ್ರಿ.ಎನ್. ಸ್ವಾಗತಿಸಿ, ಯುವ ರೆಡ್‌ಕ್ರಾಸ್ ಉಪ ಸಮಿತಿಯ ನಿರ್ದೇಶಕ ಸಚೇತ್ ಸುವರ್ಣ ವಂದಿಸಿದರು. ರಾಮಕೃಷ್ಣ ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ನಟೇಶ್ ಆಳ್ವ ವಂದಿಸಿದರು. ಮಂಗಳೂರು ವಿ.ವಿ.ಯ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಸದಸ್ಯರು ಶಿಬಿರದಲ್ಲಿ
ಭಾಗವಹಿಸಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top