ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐ ಎ ಗೆ ಹಸ್ತಾಂತರಿಸಲು ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ. ನಿಯೋಗದಲ್ಲಿ ಸುಹಾಸ್ ಶೆಟ್ಟಿ ತಂದೆ ತಾಯಿ ಉಪಸ್ಥಿತಿ.

109.6K Views 9 May 2025

ಬೆಂಗಳೂರು -ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕರಾದ ಆರ್ ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಹಾಗೂ ಸಂಸದರ ನಿಯೋಗ ಕರ್ನಾಟಕದ ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರನ್ನು ಮೃತ ಸುಹಾಸ್ ಶೆಟ್ಟಿಯವರ ತಂದೆ ತಾಯಿಯವರೊಂದಿಗೆ ರಾಜಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂಪಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ ,ರಾಜೇಶ್ ನ್ಯಾಕ್ ಉಳಿಪ್ಪಾಡಿ, ಉಮಾನಾಥ ಕೋಟ್ಯಾ ನ್,ಹರೀಶ್ ಪೂಂಜ ,ಭಾಗೀರಥಿ ಮುರುಳ್ಯ ,ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಉಭಯ ಜಿಲ್ಲೆಗಳ ಶಾಸಕರು,ಸುಹಾಸ್ ಶೆಟ್ಟಿ ಮಾವ ರಾಜೇಶ್ ಭಂಡಾರಿ, ಕಾವಳಮುಡೂರು, ಗ್ರಾ.ಪಂ ಅಧ್ಯಕ್ಷರಾದ ಅಜಿತ್ ಶೆಟ್ಟಿಯವರು ಸುಹಾಸ್ ಕುಟುಂಬದೊಂದಿಗೆ ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top