ಭಾರಿ ಗಾಳಿ ಮಳೆಗೆ ಪತ್ರಿಕಾ ಭವನ ಬಳಿ ಉರುಳಿ ಬಿದ್ದ ಮರ, ತಪ್ಪಿದ ಅನಾಹುತ

114.9K Views 25 May 2025

ಮಂಗಳೂರು, ನಗರದ ಲೇಡಿ ಹಿಲ್ ಉರ್ವಾ ಮಾರ್ಕೆಟ್ ರಸ್ತೆಯಲ್ಲಿ ಇರುವ ಪತ್ರಿಕಾ ಭವನ ಬಳಿ ಶನಿವಾರ ಸಂಜೆ 6 ಗಂಟೆಗೆ ವೇಳೆಗೆ ಭಾರಿ ಗಾಳಿ ಮಳೆಗೆ ಮರವೊಂದು ಉರುಳಿ ಬಿದ್ದಿದೆ. ಕೂಡಲೇ ಮೆಸ್ಕಾಂ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಉರುಳಿ ಬಿದ್ದ ಮರ ತೆರವು ಗೊಳಿಸಿದ್ದಾರೆ.ಈ ಘಟನೆ ಬಳಿಕ ವಿದ್ಯುತ್ ಸಂಪರ್ಕ ಕಡಿತ ಗೊಂಡಿತ್ತು. ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆ ಸಿಬ್ಬಂದಿ ದುರಸ್ತಿ ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.


ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಶ್ರೀಮತಿ ಸಂಧ್ಯಾ ಆಚಾರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top