ಬಂಟ್ವಾಳ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ. ಜು.29ರಂದು ಬಿಸಿರೋಡಿನಲ್ಲಿಪದಗ್ರಹಣ

104K Views 27 Jun 2025

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ ನಿಕಟಪೂರ್ವ ಅಧ್ಯಕ್ಷ ಡಾ.ಆನಂದ ಬಂಜನ್ ಪ್ರಕಟಿಸಿದ್ದಾರೆ.
ಹಿರಿಯ ಜೇಸಿಗಳಾದ ಪಿ.ಮಹಮ್ಮದ್ (ಆಡಳಿತ) ಸಂದೀಪ್ ಸಾಲ್ಯಾನ್ (ಸಾರ್ವಜನಿಕ ಸಂಪರ್ಕ) ಮಹೇಶ ನಿಟಿಲಾಪುರ (ವ್ಯಕ್ತಿತ್ವವಿಕಸನ)ವಿಭಾಗದ ಉಪಾಧ್ಯಕ್ಷರಾಗಿದ್ದಾರೆ.
ಕಾರ್ಯದರ್ಶಿಯಾಗಿ ನ್ಯಾಯವಾದಿ ಶೈಲಜಾ ರಾಜೇಶ್,ಜೊತೆಕಾರ್ಯದರ್ಶಿ ಯಾಗಿ ಯೋಗೀಶ ಬಂಗೇರ, ನಿರ್ದೇಶಕರಾಗಿ ಸ್ಥಾಪಕ ಅಧ್ಯಕ್ಷ ಪಿಪಿಎಫ್ ಜಯಾನಂದ ಪೆರಾಜೆ, ಮಾಜಿಅಧ್ಯಕ್ಷ ಡಾ.ಆನಂದ ಬಂಜನ್ ನಿಯುಕ್ತಿಗೊಂಡಿದ್ದಾರೆ.ಹದಿನಾಲ್ಕು ಮಂದಿ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಅಧ್ಯಕ್ಷ ಕೇದಿಗೆ ಆದಿರಾಜ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದಗ್ರಹಣ ಸಮಾರಂಭವನ್ನು ಜು.29 ರಂದು ಬೆಳಿಗ್ಗೆ 10.25ಕ್ಕೆ ಬಿಸಿರೋಡಿನ ಪೊಳಲಿ ದ್ವಾರದ ಬಳಿ ನೂತನ ಸಭಾಂಗಣ ಅಕ್ಷಯ ಸಭಾಭವನ ಲೋಕಾರ್ಪಣೆ ಗೊಳ್ಳಲಿದೆ.
ಪದಗ್ರಹಣ ಸಮಾರಂಭ
11 ಗಂಟೆಗೆ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ವಿಎಸ್ ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಗಂಗಾಧರ ಆಳ್ವ ಮುಖ್ಯ ಅತಿಥಿಯಾಗಿ, ಗೌರವ ಅತಿಥಿಗಳಾಗಿ ಎಸ್ಸಿಐ ರಾಷ್ಟ್ರಾಧ್ಯಕ್ಷರಾದ ಎಂ.ಆರ್.ಜಯೇಶ್, ಮಾಜಿ ರಾಷ್ಟ್ರಾಧ್ಯಕ್ಷ ಡಾ.ಕೆ.ಅರವಿಂದ ರಾವ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top