ಕಲಿಕೆಗೆ ಶಿಸ್ತು ಮುಖ್ಯ.ಕಲಿಕೆಯೊಂದಿಗೆ ಉತ್ತಮ ಗುಣನಡತೆ ಬೆಳೆಸಿಕೊಳ್ಳಬೇಕು: ಸುರೇಶ್ ಬಾಳಿಗ

119.2K Views 1 Jul 2025

ಬಂಟ್ವಾಳ ಜೂ.೧. ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಿಸ್ತು ಮತ್ತು ಪರಿಶ್ರಮದಿಂದ ನಿರ್ದಿಷ್ಟವಾದ ಗುರಿಯನ್ನು ಇಟ್ಟುಕೊಂಡು ನಿರಂತರ ಸಾಧನೆ ಮಾಡಬೇಕು. ಕನಸನ್ನು ನನಸು ಮಾಡಲು ಶಿಸ್ತಿನಿಂದ ಅಭ್ಯಾಸ ಮಾಡಬೇಕು.ಕಲಿಕೆಗೆ ಶಿಸ್ತು ಅಗತ್ಯ.ಆರೋಗ್ಯ ಮತ್ತು ಉತ್ತಮ ಗುಣನಡತೆ ಕಾಪಾಡಿಕೊಳ್ಳಬೇಕು ಎಂದು ಬಂಟ್ವಾಳ ಸ್ವರ್ಣೋದ್ಯಮಿ ಸುರೇಶ್ ಬಾಳಿಗಾ ಹೇಳಿದರು.
ಅವರು ಎಸ್.ವಿ.ಎಸ್ ದೇವಳ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ 2025-26ನೇ ಸಾಲಿನ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಸಮಿತಿಯ ಸದಸ್ಯರಾದ ಬಿ.ಶಿವಾನಂದ ಬಾಳಿಗ, ಬಿ. ಸುಬ್ರಾಯ ನಾಯಕ್ , ಪಿ. ಪ್ರಕಾಶ್ ಕಿಣಿ, ನ್ಯಾಯವಾದಿ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಎಸ್ವಿಎಸ್ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ರೋಶ್ನಿ ತಾರಾ ಡಿಸೋಜ ಉಪಸ್ಥಿತರಿದ್ದರು.
ಪ್ರಾಂಶುಪಾಲ ಎಮ್‌. ಗಂಗಾಧರ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ ಜವಾಬ್ದಾರಿ ಘೋಷಣೆ ಮಾಡಿದರು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಶುಭ ಹಾರೈಸಿ ಮಾತನಾಡಿದರು. ಉಪನ್ಯಾಸಕರಾದ ವೆಂಕಟೇಶ ನಾಯಕ್ , ಮಂಜುನಾಥ ಶೆಣೈ ಸಹಕರಿಸಿದರು.
ವಿದ್ಯಾರ್ಥಿ ನಾಯಕಿಯಾಗಿ ವೇದಿಕಾ ದೀಪಕ್ ಗಾರ್ಗಿ, ಕಾರ್ಯದರ್ಶಿಯಾಗಿ ತನುಶ್ರೀ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಅಹಮ್ಮದ್ ಸಾಹಿಲ್, ವಿದ್ಯಾಭ್ಯಾಸ ಕಾರ್ಯದರ್ಶಿಯಾಗಿ ರಾಜರಾಜೇಶ್ವರೀ ಭಟ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಹಮ್ಮದ್ ಶಕೀರ್ , ಶಿಸ್ತು ಸಮಿತಿ ಕಾರ್ಯದರ್ಶಿಯಾಗಿ ಮೋಕ್ಷಿತಾ ಮೊದಲಾದವರು ಸಂಚಾಲಕ ಸುರೇಶ ಬಾಳಿಗರಿಂದ ಪ್ರಮಾಣವಚನ ಸ್ವೀಕರಿಸಿದರು. ಸಂಸ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳು ಸರಸ್ವತೀ ವಂದನೆ ಬಳಿಕ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top