ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಉದ್ಘಾಟನೆಗೆ ರಾಜ್ಯಪಾಲರಿಗೆ ಆಹ್ವಾನ

93.1K Views 2 Jul 2025

ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ (ಹಳೆ) ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ರಾಜ್ಯಪಾಲ ಹಾಗೂ ರೆಡ್‌ಕ್ರಾಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲು ಆಗಮಿಸುವಂತೆ ಆಹ್ವಾನಿಸಿದರು.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ರಾಜ್ಯಪಾಲರು ಉದ್ಘಾಟನೆಗೆ ಆಗಮಿಸುವುದಾಗಿ ತಿಳಿಸಿದರು. ರೆಡ್‌ಕ್ರಾಸ್ ರಾಜ್ಯ ಘಟಕದ ಚೇರ್ಮನ್ ಬಸ್ರೂರು ರಾಜೀವ್ ಶೆಟ್ಟಿ ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top