ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ನವಂಬರ್ 14 ರಂದು ತೆರೆಗೆ

103.9K Views 8 Jul 2025

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು.
“ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.
ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
“‘ಜೈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.
ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ.
ನವಂಬರ್ 14 ರಂದು “ಜೈ” ಸಿನಿಮಾ ತೆರೆ ಕಾಣಲಿದೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top