ಗುರು ಪೂರ್ಣಿಮೆ: ಅಮೃತ ವಿದ್ಯಾಲಯಂ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳ ಪಾದ ಪೂಜೆ

93.5K Views 10 Jul 2025

ದಿನಾಂಕ: 10ನೇ ಜುಲೈ 2025
“ಗುರು ಬ್ರಹ್ಮ, ಗುರು ವಿಷ್ಣು,
ಗುರು ದೇವೋ ಮಹೇಶ್ವರ:
ಗುರು ಸಾಕ್ಷಾತ್ ಪರಬ್ರಹ್ಮ,
ತಸ್ಮೈ ಶ್ರೀ ಗುರವೇ ನಮ:
ಗುರು ಪೂರ್ಣಿಮೆಯ ಪ್ರಯುಕ್ತ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳ ಪಾದ ಪೂಜೆಯನ್ನು ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಸಂಸ್ಕೃತಿ ಪೂಜೆಯನ್ನು ನಡೆಸಿಕೊಟ್ಟರು.


ಶಿಕ್ಷಕ ಅಭಿಷೇಕ್ ಅವರ ನೇತೃತ್ವದಲ್ಲಿ ಪ್ರಾರ್ಥನೆ ಮತ್ತು ಭಜನೆಗಳೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು,
ಶ್ರೀಮತಿ ಮೃದಲಾ ಅವರ ಮಾರ್ಗದರ್ಶನದಲ್ಲಿ ಶ್ರೀಮತಿ ರಶ್ಮಿ ಅವರು ಪಾದುಕಾ ಪೂಜೆಯನ್ನು ಶ್ರದ್ಧಾ, ಭಕ್ತಿ ಯಿಂದ ಮಾಡಿದರು.


ಶ್ರೀಮತಿ ಯೋಗಿತಾ ಅವರ ಮಾರ್ಗದರ್ಶನದಲ್ಲಿ, 10 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು . ಶ್ರೀಮತಿ ಯೋಗಿತಾ ಅವರು ಜೀವನವನ್ನು ರೂಪಿಸುವಲ್ಲಿ ಗುರುವಿನ ಪ್ರಮುಖ ಪಾತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು,

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top