ಜಲ ಸಂರಕ್ಷಣೆ ಅರಿವು ಮೂಡಿಸುವುದು ಅವಶ್ಯ-ಸಂಸದ ಕ್ಯಾ.ಬ್ರಿಜೇಶ್ ಚೌಟ

111K Views 11 Jul 2025

ಮಂಗಳೂರು: ಮಳೆ ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಜಿಲ್ಲೆಯ ಪ್ರತಿ ಮನೆ ಮನೆಗಳಲ್ಲೂ ಜಲ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅಭಿಯಾನ ನಡೆಸುವ ಅಗತ್ಯವಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ ,ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ಚಿಕ್ಕಮಗಳೂರು ಇದರ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಮಳೆನೀರು ಕೊಯ್ಲು ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜನತೆ ಬೆಂಬಲಿಸುತ್ತಾರೆ. ಸಂಸದನಾಗಿ ಜಿಲ್ಲೆಯ ಅಭಿವೃದ್ದಿಯತ್ತ ಮಾತ್ರ ಗಮನ ಕೇಂದ್ರೀಕರಿಸಿದ್ದೇನೆ.
ಕೇಂದ್ರ ಸರ್ಕಾರದ ಸೌರ ಶಕ್ತಿ ಬಳಕೆಯ ಸೂರ್ಯ ಘರ್ ಯೋಜನೆಯ ಪ್ರಯೋಜನವನ್ನು ಜನತೆ ಪಡೆಯಬೇಕು. ಈ ‌ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು.
ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ‌ ಅಡ್ಕಸ್ಥಳ, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ
ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಖಜಾಂಜಿ ಪುಷ್ಪರಾಜ್ ಬಿ.ಎನ್.,
ಅರಿವು ಕೇಂದ್ರದ ನಿರ್ದೇಶಕ ಡಾ.ಯು. ಪಿ.ಶಿವಾನಂದ,ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ನ
ನಿರ್ದೇಶಕ ಮೈಕೆಲ್ ಬ್ಯಾಪ್ಟಿಸ್ಟ್ , ಮನೋಜ್ ಸ್ಯಾಮ್ಯುಯೆಲ್ ಬ್ಯಾಪ್ಟಿಸ್ಟ್ , ಲಿನ್‌ಫೋರ್ಡ್ ಪಿಂಟೊ, ರೋಟರಿ ಅಸಿಸ್ಟೆಂಟ್ ಗವರ್ನರ್ ಚೆನ್ನಗಿರಿ ಗೌಡ, ಸಹಾಯಕ ಗವರ್ನರ್ ರವಿಶಂಕರ್ ರಾವ್, ಜಿಲ್ಲಾ ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲ್ಬಾವಿ,
ರೋಟರಿ ಕ್ಲಬ್ ಝೋನಲ್ ಲೆಫ್ಟಿನೆಂಟ್ ರವಿ ಜಲನ್, ಗೀತಾ ರೈ ಮುಂತಾದವರು ಉಪಸ್ಥಿತರಿದ್ದರು.ಇದೇ ಸಂದರ್ಭ ಮಂಗಳೂರು ಪ್ರೆಸ್ ಕ್ಲಬ್ ನಿವೃತ್ತ ಸಿಬ್ಬಂದಿ ಚಂಚಲಾಕ್ಷಿ ಅವರನ್ನು ರೋಟರಿ ಮಂಗಳೂರು ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top