ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ -ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ

112.9K Views 28 Jul 2025

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ‌ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಕೇಂದ್ರದಲ್ಲಿ ದ.ಕ.ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ರೆಡ್ ಕ್ರಾಸ್ ನ ಸೇವಾಕಾರ್ಯಗಳಿಗೆ ನೂತನ ಕಟ್ಟಡ ಇನ್ನಷ್ಟು ಶಕ್ತಿ ನೀಡಲಿ ಎಂದು ಸಚಿವರು ಹಾರೈಸಿದರು.
ರೆಡ್ ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಸಚಿವರನ್ನು ಗೌರವಿಸಿದರು.
ಎಂಎಲ್ ಸಿ ಐವನ್ ಡಿಸೋಜಾ, ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಸಮಿತಿ ಅಧ್ಯಕ್ಷ ಪುಷ್ಪರಾಜ್ ಜೈನ್, ಖಜಾಂಜಿ ಮೋಹನ್ ಶೆಟ್ಟಿ.ಕೆ., ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ , ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಪಿ.ಬಿ.ಹರೀಶ್ ರೈ , ಮಾಜಿ ಕಾರ್ಪೋರೇಟರ್ ಎ.ಸಿ.ವಿನಯರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ,
ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್ .ಡಿ.ಎಸ್ ಉಪಸ್ಥಿತರಿದ್ದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top