ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪಲಿತಾಂಶ ಪ್ರಕಟ

100.9K Views 5 Aug 2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.


ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ  ಚಿತ್ರ ಪ್ರಥಮ ಸ್ಥಾನ ಪಡೆದಿದೆ. ಮೈಸೂರಿನ ಕನ್ನಡಪ್ರಭ ಪತ್ರಿಕೆಯ ಛಾಯಾಗ್ರಾಹಕ  ಎಂ.ಎಸ್. ಬಸವಣ್ಣ ಅವರು ದ್ವಿತೀಯ, ಮೈಸೂರಿನ ದ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರಿನ್ಸಿಪಾಲ್ ಫೋಟೋಗ್ರಾಪರ್ ಉದಯಶಂಕರ್ ಅವರು
ತೃತೀಯ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪ್ರಜಾವಾಣಿಯ ಹಿರಿಯ ಛಾಯಾಗ್ರಾಹಕ ಎಂ.ಎಸ್. ಮಂಜುನಾಥ್  ಮತ್ತು ಇಂದ್ರಕುಮಾರ್ ದಸ್ತೇನವರ ಚಿತ್ರ ತೀರ್ಪುಗಾರರ ಮೆಚ್ಚುಗೆಯ ಬಹುಮಾನಕ್ಕೆ ಪಾತ್ರವಾಗಿದೆ.
*ಇಂದು ಬಹುಮಾನ ವಿತರಣೆ:* ಆ.6ರಂದು (ಇಂದು) ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ  ನಡೆಯಲಿರುವ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು.
*ಪ್ರಶಸ್ತಿ ವಿವರ:* ಸುದ್ದಿ ಚಿತ್ರ ವಿಭಾಗದಲ್ಲಿ ಸ್ಪರ್ಧೆಗೆ ಛಾಯಾಚಿತ್ರ ಆಹ್ವಾನಿಸಲಾಗಿದ್ದು, ಪ್ರಥಮ ಬಹುಮಾನ 10ಸಾವಿರ ರೂ. ಮತ್ತು ನಗದು ಫಲಕ, ದ್ವಿತೀಯ ಬಹುಮಾನ 5 ಸಾವಿರ ರೂ. ನಗದು ಮತ್ತು ಫಲಕ ಹಾಗೂ ತೃತೀಯ ಬಹುಮಾನ3 ಸಾವಿರ ರೂ. ನಗದು ಮತ್ತು ಫಲಕ ನೀಡಲಾಗುವುದು ಛಾಯಾಚಿತ್ರ ಸ್ಪರ್ಧಾ ವಿಭಾಗದ ಸಂಚಾಲಕ ಸತೀಶ್ ಇರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top