ಬೇಬಿ ಕುಂದರ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆ

100.2K Views 12 Aug 2025

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆಯು ಶ್ರೀ ಬೇಬಿ ಕುಂದರ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಇತ್ತೀಚಿನ 9&11 ಗೊಂದಲಗಳನ್ನು ನಿವಾರಿಸುವ ಬಗ್ಗೆ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ ಸಭೆಯನ್ನು ಕರೆದು ಚರ್ಚಿಸುವಂತೆ ನಿರ್ಣಯ ತೆಗೆದುಕೊಳ್ಳಲಾಯಿತು.ಬಂಟ್ವಾಳ ಕಸಬಾ ಗ್ರಾಮದ ಗಿರಿಗುಡ್ಡೆ ಕೆರೆ ಅಭಿವೃದ್ಧಿ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಕಡತವನ್ನು ಕಳುಹಿಸಿಕೊಡಲು ನಿರ್ಣಯಿಸಲಾಯಿತು.ಬುಡಾ ಸದಸ್ಯರಾದ ಶ್ರೀ ಮನೋಹರ್ ಕುಲಾಲ್, ಅಬ್ದುಲ್ ರಜಾಕ್,ಹರೀಶ್ ಅಜ್ಜಿಬೆಟ್ಟು,ಅಮಟಾಡಿ ಪಂಚಾಯತ್ ಅಭಿವೃದ್ಧಿಅಧಿಕಾರಿ ಶ್ರೀ ಗೋಕುಲದಾಸ್ ಭಕ್ತ, ನರಿಕೊಂಬು ಪಂಚಾಯತ್ ಅಧಿಕಾರಿ ಶ್ರೀ ಹರೀಶ್, ಪುರಸಭಾ ಪ್ರತಿನಿಧಿ ಅಬ್ದುಲ್ ರಜಾಕ್ ಯೋಜನಾ ಸದಸ್ಯ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಡೊಂಬರ ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top