ಅಂಚೆ ಅಪಘಾತ ವಿಮೆ ಉಪಯುಕ್ತ ಯೋಜನೆ: ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಮಾಹಿತಿ

100.2K Views 22 Aug 2025

ಮಂಗಳೂರು : ಭಾರತೀಯ ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆ ಅತ್ಯಂತ ಸರಳವಾದ ಹಾಗೂ ಜನಸಾಮಾನ್ಯರ ಕೈಗೆಟುಕುವ ಉಪಯುಕ್ತ ವಿಮಾ ಯೋಜನೆಯಾಗಿದೆ ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ಎಂ.ಸುಧಾಕರ ಮಲ್ಯ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಇಲಾಖೆ ಸಹಭಾಗಿತ್ವದಲ್ಲಿ ಬುಧವಾರ ಪತ್ರಿಕಾ
ಭವನದಲ್ಲಿ ನಡೆದ 10 ಲಕ್ಷ ರೂ. ಮೊತ್ತದ ಉಚಿತ ವಿಮಾ ಯೋಜನೆಯ ನೋಂದಣಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅಂಚೆ ಇಲಾಖೆಯ ಈ ಅಭಿಯಾನಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಯೆ ವ್ಯಕ್ತವಾಗಿದೆ. ಕಳೆದ ಸಾಲಿನಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮೂಲಕ ಮಂಗಳೂರು ವಿಭಾಗದಲ್ಲಿ 21 ಸಾವಿರ ಮಂದಿ ಅಪಘಾತ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.
ಅಂಚೆ ಇಲಾಖೆಯ ಉಪ ಅಧೀಕ್ಷಕ ದಿನೇಶ್ ಮತ್ತು ಐಪಿಪಿಬಿ ಮ್ಯಾನೇಜರ್ ಸುಬ್ರಹ್ಮಣ್ಯ ಅವರು ಅಂಚೆ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top