ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

116.3K Views 26 Aug 2025

ಮAಗಳೂರು: ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.
ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.
ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿAಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು ಸೊಸೈಟಿಯ ಪ್ರಕಟಣೆಯಲ್ಲಿ ಕೋರಲಾಗಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top