ನೂರುದ್ದೀನ್ ಜುಮಾ ಮಸೀದಿ: ಬೃಹತ್ ಮೀಲಾದ್ ರ‍್ಯಾಲಿ

104.6K Views 6 Sep 2025

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿಯಲ್ಲಿ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ. ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಮೀಲಾದ್ ರ‍್ಯಾಲಿ ನಡೆಯಿತು.
ರ‍್ಯಾಲಿಯ ಉದ್ಘಾಟನೆಯನ್ನು ಖತೀಬ್ ಅಸೀಫ್ ದಾರಿಮಿ ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸಿದ್ದಿಕ್ ಅಬೂಬಕ್ಕರ್, ನೂರುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಮೊಹಮ್ಮದ್ ಸಜೀಪ, ಕಾರ್ಯದರ್ಶಿ ಅಬೂಬಕ್ಕರ್ ಮೆಲ್ಕರ್, ಮೊಹಮ್ಮದ್ ಹನೀಫ್, ಮೊಹಮ್ಮದ್ ಸಿದ್ದಿಕ್, ಅಬ್ದುಲ್ ಮಜೀದ್ ಬೋಗೋಡಿ, ಇಸ್ಮಾಯಿಲ್ ಮುಸ್ಲಿಯಾರ್, ನಾಸಿರ್ ಅಸ್ಲಾಮಿ, ಅಬ್ದುರಹ್ಮಾನ್ ಮುಸ್ಲಿಯಾರ್, ಅನ್ಸಾರ್ ಬೋಗೋಡಿ, ಝಕಾರಿಯ ಬೋಗೋಡಿ, ಫಾರೂಕ್ ಎಬಿಸಿ ಮತ್ತಿತರರು ಉಪಸ್ಥಿತರಿದ್ದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top