ಏಕ ನಿವೇಶನ ವಿನ್ಯಾಸ ನಕ್ಷೆ ತಾಂತ್ರಿಕ ಅನುಮೋದನೆ

109.3K Views 13 Sep 2025

ದಿನಾಂಕ 12/09/2025ರಂದು ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಾಯತ್ರಿ ದೊಂಬರ, ಗುರುಪ್ರಸಾದ್ ಸಹಾಯಕ ನಿರ್ದೇಶಕರು ನಗರ ಯೋಜನಾ ಪ್ರಾಧಿಕಾರ ಮಹಾನಗರ ಪಾಲಿಕೆ ಮಂಗಳೂರು ಇವರು ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಮತ್ತು ಕಟ್ಟಡ ಪರವಾನಿಗೆಯ ಕಟ್ಟಡದ ವಿನ್ಯಾಸನಕ್ಷೆಗೆ ತಾಂತ್ರಿಕ ಅನುಮೋದನೆ ಹಾಗೂ ಸ್ವಾಧೀನ ಪತ್ರ ವಿತರಣೆ, ಸರ್ಕಾರದ ಇತ್ತೀಚಿನ ಆದೇಶ ಮತ್ತು ಸುತ್ತೋಲೆಗಳ ಕುರಿತು ಮಾಹಿತಿ ನೀಡಿದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಜಿಪಂ ಯೋಜನಾ ನಿರ್ದೇಶಕರಾದ ಜಯರಾಂ ಕೆ.ಇ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ತಾರಾನಾಥ್ ಸಾಲ್ಯಾನ್, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ.(ಗ್ರಾ.ಉ), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top