ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

99.7K Views 29 Sep 2025

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.
ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.
“ಪೌರ ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ” ಎಂದು ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಹೇಳಿದರು.
ಮಹಾ ನಗರ ಪಾಲಿಕೆ ಆಯುಕ್ತರು ಈ ಸಂದರ್ಭದಲ್ಲಿ, ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ, ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top