ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಜೈ ಶಂಕರ್ ಉದ್ಘಾಟಿಸಿ ಮಾತನಾಡಿದರು. ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯ : ಜೈ ಶಂಕರ್

91.8K Views 20 Nov 2025

ಮೂಲ್ಕಿ: ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯವಾಗಿದೆ. ಪರಿಸರವನ್ನು ಸ್ವಚ್ಚವಾಗಿಟ್ಟಲ್ಲಿ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು, ಪ್ಲಾಸ್ಟಿಕ್ ವಸ್ತುಗಳನ್ನು ದೂರಮಾಡಿಕೊಂಡು ಪರಿಸರ ಸ್ನೇಹಿಯಾಗಿ ಬಾಳೋಣ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಜೈ ಶಂಕರ್ ಹೇಳಿದರು. ಅವರು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾ ಸಂಜೀವಿನಿ ಆಸ್ಪತ್ರೆಯಿಂದ ಕಟೀಲು ದೇವಸ್ಥಾನದವರೆಗೆ ಕಟೀಲು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕಟೀಲು ಬಸ್ ನಿಲ್ದಾಣದಲ್ಲಿ ಬೀದಿ ನಾಟಕ, ಕಿನ್ನಿಗೋಳಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮತ್ತು ಉಚಿತ ಬಟ್ಟೆಯ ಕೈಚೀಲಗಳನ್ನು ವಿತರಿಸಲಾಯಿತು.
ಆರೋಗ್ಯಾಧಿಕಾರಿ ಬ್ರಹ್ಮಾನಂದ, ಕಂದಾಯ ನಿರೀಕ್ಷಕ ರಾಘವೇಂದ್ರ, ಇಂಜಿನಿಯರಿಂಗ್ ವಿಭಾಗದ ಪವನ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ, ಪ್ರಮುಖರಾದ ಈಶ್ವರ್ ಕಟೀಲ್, ಪ್ರಕಾಶ್ ಆಚಾರ್ಯ, ಪ್ರೇಮ್‌ರಾಜ್ ಶೆಟ್ಟಿ, ಕಾರ್ಯಕ್ರಮದ ಸಹ ಸಂಯೋಜನೆಯ ಮೂಲ್ಕಿ ಸುಧಾಮ ಫೌಂಡೇಶನ್‌ನ ಶೈಲೇಶ್ ಕುಮಾರ್, ನವೀನ್ ರಾಜ್, ವೀರಣ್ಣ, ರಮೇಶ್, ಶಿಕ್ಷಣ ಸಂಸ್ಥೆಯ ಪ್ರಮುಖರು, ಮತ್ತಿತರರು ಇದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top