ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಟಿವಿ ಕೊಡುಗೆ

101.7K Views 23 Nov 2025

ಮಂಗಳೂರು, ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ಮಹಾ ಪ್ರಬಂಧಕ ಅರುಣ್ ಪ್ರಭ ಕೊಡುಗೆಯಾಗಿ ನೀಡಿರುವ ಟಿವಿ ಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು ಈ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದರು. ಆನೆಗುಂಡಿ ಅಂಗನವಾಡಿ ಕೇಂದ್ರ ಬಾಡಿಗೆ ಕೊಠಡಿಯಲ್ಲಿದ್ದು, ಅದಕ್ಕೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಜಮೀನು ಒದಗಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲಭವನ ಸೊಸೈಟಿ ಅಧ್ಯಕ್ಷ ಬಿ ಆರ್ ನಾಯ್ಡು ಕರ್ನಾಟಕ ಸೆಣಬು ಅಭಿವೃದ್ಧಿ ನಿಗಮದ ಅಧ್ಯಕ್ಷ ನಟರಾಜ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜೆ,,ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ್ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಎಂ ಸಿ ಸಿ ಬ್ಯಾಂಕ್ ನಿರ್ದೇಶಕ ಅಲ್ವಿನ್ ಮೊಂತೆರೋ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಸಿಂಧೂ, ಶಿಕ್ಷಕಿ ಲಕ್ಷ್ಮಿ, ಕೆ ವಿ ಪ್ರಭಾಕರ್ ಕುಟುಂಬದ ಸದಸ್ಯರು, ವಿವಿಧ ಅಂಗನವಾಡಿ ಕೇಂದ್ರದ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top