ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026. ಜನವರಿ 18 ರಂದು ಕಾಸರಗೋಡು ನಲ್ಲಿ ಪ್ರಶಸ್ತಿ ಪ್ರದಾನ

101.8K Views 30 Dec 2025

ಮಂಗಳೂರು, ಕಾಸರಗೋಡು ಕನ್ನಡ ಭವನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾಗಿರುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 18 ರಂದು ಕಾಸರಗೋಡು ನಲ್ಲಿ ಕನ್ನಡ ಭವನ ರಜತ ಸಂಭ್ರಮ ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ.
ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top