ಯೆನೆಪೋಯ ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ

108.2K Views 2 Mar 2026

ಮಂಗಳೂರು: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ನರ್ಸಿಂಗ್ ವಿಭಾಗದ ವತಿಯಿಂದ ಡಿಜಿಟಲ್ ಶಿಕ್ಷಣಶಾಸ್ತ್ರ ಬೋಧನ -ಕಲಿಕೆಯಲ್ಲಿ ಕಲೆ ವಿಷಯದ ಬಗ್ಗೆ ಸಂಸ್ಥೆಯ ಯೆಂಡೋರೆನ್ಸ್ ಸಭಾಂಗಣದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿದ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಮಾತನಾಡಿ “ವಿದ್ಯಾರ್ಥಿಗಳು ಮತ್ತು ಬೋಧಕರು ಕೃತಕ ಬುದ್ಧಿಮತ್ತೆ ಸಾಧನಗಳನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳಬೇಕು . ಡಿಜಿಟಲ್ ನೈತಿಕತೆ ಮತ್ತು ಆಧುನಿಕ ಶಿಕ್ಷಣದಲ್ಲಿ ಲಭ್ಯವಿರುವ ತಾಂತ್ರಿಕ ಸೌಲಭ್ಯಗಳ ಬಗ್ಗೆ ಅರಿವು ಹೊಂದಿರುವುದು ಅತ್ಯಗತ್ಯ ಎಂದರು.
ಮುಖ್ಯ ಅತಿಥಿಯಾಗಿದ್ದ ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಶ್ವಿನಿ ದತ್ .ಆರ್.ಅವರು ಪರಿವರ್ತನಾಶೀಲ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.
ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲೀನಾ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು. ವಿವಿಧ ರಾಜ್ಯಗಳ ೩೫೦ ಪ್ರತಿನಿಧಿಗಳು ಭಾಗವಹಿಸಿದ್ದರು. ಸಮ್ಮೇಳನದ ಅಧ್ಯಕ್ಷೆ ಡಾ. ಪ್ರಿಯಾ ರೇಷ್ಮಾ ಅರಾನ್ಹಾ ಸ್ವಾಗತಿಸಿ, ಕಾರ್ಯದರ್ಶಿ ನಿತ್ಯಶ್ರೀ ಬಿ.ವಿ.ವಂದಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top