ಮಂಗಳೂರು, ಎ.2- ಬೆಂಗಳೂರಿನಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ )2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದು ಮಂಗಳೂರಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಮಂಗಳೂರು ಇದರ ಬ್ಯೂರೋ ಚೀಫ್ ಆರ್. ರಾಮಕೃಷ್ಣ ಅವರು ಕೆಯುಡಬ್ಲ್ಯೂಜೆ ಇದರ 2024 ನೇ ಸಾಲಿನ ‘ಗರುಡನಗಿರಿ ನಾಗರಾಜ್’ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಬೀದರ್‌ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಆರ್. ರಾಮಕೃಷ್ಣ ಅವರು 2020ರ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನೂ ಈಗಾಗಲೇ ಪಡೆದಿರುತ್ತಾರೆ.


























































































































































































