ಉರುಮಣೆ ಶಾಲೆಯಲ್ಲಿ ಎನ್ ಎಸ್ ಎಸ್ ಕಾರ್ಯಾಗಾರ; ಶೈಕ್ಷಣಿಕ ಸಾಮಾಗ್ರಿ ವಿತರಣೆ

41.7K Views 12h ago

ಮಂಜನಾಡಿ,ಮೇ,25ಮಂಗಳೂರು ವಿಶ್ವವಿದ್ಯಾನಿಲಯದ ನೆಹರು ಚಿಂತನ ಕೇಂದ್ರ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ,ವಿಶ್ವವಿದ್ಯಾನಿಲಯ ಕಾಲೇಜು, ಮಂಗಳಗಂಗೋತ್ರಿಯ ಸಹಯೋಗ ದೊಂದಿಗೆ ಒಂದು ದಿನದ ಎನ್. ಎಸ್. ಎಸ್ ಕಾರ್ಯಾಗಾರ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾ ಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಉರುಮಣೆ ಯಲ್ಲಿ ನಡೆಯಿತು.


ಉರುಮಣೆ ಶಾಲೆಯ ಆಟದ ಮೈದಾನ ಮಕ್ಕಳಿಗೆ ಆಟಕ್ಕೆ ಯೋಗ್ಯವಂತೆ ಶಾಲಾ ಆಟದ ಮೈದಾನವನ್ನು ಸರಿಪಡಿಸುವ ಮತ್ತು ಸ್ವಚ್ಚತಾ ಕಾರ್ಯ ನಡೆಯಿತು. ವಿಶ್ವವಿದ್ಯಾನಿ ಲಯ ಕಾಲೇಜಿನ ವಿದ್ಯಾರ್ಥಿ ಗಳು ಬೆಳಗ್ಗಿನಿಂದ ಸಂಜೆಯ ತನಕ ಶ್ರಮದಾನ ವನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ನೆಹರು ಚಿಂತನ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ನಾಯ್ಕ ಮತ್ತು ರೋಟರಿ ಕ್ಲಬ್ ನ ಅಧ್ಯಕ್ಷರಾದ ಭಾಸ್ಕರ್ ರೈ ರವರು ತರಕಾರಿ ಗಿಡಗಳನ್ನು ನೆಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ಸಮರ್ಪಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ,ರೋಟರಿ 3180 ಮಾಜಿ ಗವರ್ನರ್ ಡಾ. ದೇವದಾಸ್ ರೈ ಭಾಗವಹಿಸಿದ್ದರು. ವಿಶ್ವವಿದ್ಯಾನಿಲಯ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಶೇಷಶಯನ ಹೆಚ್. ವಿ, ನೆಹರು ಚಿಂತನ ಕೇಂದ್ರದ ಸಂಶೋಧನ ಸಹಾಯಕಿ ಡಾ. ನಯನ ಕೃಷ್ಣಾಪುರ, ಸಂಧ್ಯಾ ಅಂಚನ್, ಉರುಮನೆ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ಎಲ್ ಅಶ್ರಫ್, ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಪಿ. ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಉರುಮಣೆ ಶಾಲಾ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು.

Read More News

Scroll to Top