ಕಲಾ ನಡಿಗೆ ಜನರ ಬಳಿಗೆ ವಿನೂತನ ಕಾರ್ಯಕ್ರಮ

93.2K Views 4d ago

ಮಂಗಳೂರು, ಸಂಗೀತ ಆಲಿಸುವುದರ ಮೂಲಕ ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣಾ ಪ್ರಭ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾ ಸಾಧನಾ ಮಂಗಳೂರು ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾದ ಕಲಾ ನಡಿಗೆ ಜನರ ಬಳಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಘ ಸಂಸ್ಥೆಗಳ ಮೂಲಕ ಈ ರೀತಿಯ ಕಾರ್ಯಕ್ರಮ ಆಯೋಜಿಸಿರುವುದು ಮಾದರಿಯಾಗಿದೆ. ನಮ್ಮ ಕಲೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರಾಜೇಶ್, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕಲಾ ನಡಿಗೆ ಜನರ ಬಳಿಗೆ ಆಯೋಜಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕದ್ರಿ ಉದ್ಯಾನವನ ಸಲಹಾ ಸಮಿತಿ ಸದಸ್ಯ ಜಗನ್ನಾಥ ಗಾಂಭೀರ್,ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ ಸಿರಿ ತೋಟಗಾರಿಕೆ ಇಲಾಖೆಯ ರುಕ್ಮಯ್ಯ,ಪತ್ರಕರ್ತರಾದ ಶ್ರೀನಿವಾಸ್ ನಾಯಕ್, ರಾಜೇಶ್ ದಡ್ಡ0ಗಡಿ ಕಲಾವಿದರಾದ ವಿಭಾ ನಾಯಕ್, ಹೇಮಂತ್ ಭಾಗವತ್, ಅಶ್ವಿತ್ ಪ್ರಭು, ದೀಪ್ತಿ, ಭೂಮಿ ಉಪಸ್ಥಿತರಿದ್ದರು.
ವಿಭಾ ಶ್ರೀನಿವಾಸ್ ನಾಯಕ್ ಹಾಗೂ ಸಂಗೀತ ಕಾರ್ಯಕ್ರಮ ನಡೆಯಿತು.

Read More News

Scroll to Top