ಜೂ.೧೩ರಂದು ರೆಡ್‌ ಕ್ರಾಸ್‌ನಿಂದ ವಿಶ್ವ ತಂಬಾಕು ರಹಿತ ದಿನಾಚರಣೆ

31.1K Views 11h ago

ಮಂಗಳೂರು : ಭಾರತೀಯ ರೆಡ್‌ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ಪ.ಪೂ.ಕಾಲೇಜು ಹಂಪನಕಟ್ಟೆ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಜೂ.೧೩ರಂದು ಬೆಳಗ್ಗೆ ೧೧ಕ್ಕೆ ಹಂಪನಕಟ್ಟೆ ಸರ್ಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಡೆಯಲಿದೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸರ್ಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಅಂತೋನಿ ಮಸ್ಕರೇನ್ಹಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಲೋಚಕ ಪುಂಡಲೀಕ ಲಕಾಟೆ ಮತು ವೆನ್ಲಾಕ್ ಆಸ್ಪತ್ರೆಯ ತಂಬಾಕು ನಿಯಂತ್ರಣ ಕೇಂದ್ರದ ಸಮಾಲೋಚಕ ವಿಜಯಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಯೂತ್ ರೆಡ್‌ ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ.ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

Scroll to Top