ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ.

116.7K Views 21 Jun 2026

ಸುರತ್ಕಲ್, ಜೂ. 20:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ಮುಕ್ಕದ ಶ್ರೀನಿವಾಸ ಆಸ್ಪತ್ರೆಯಲ್ಲಿಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಡೇವಿಡ್ ರೊಸಾರಿಯೊ ಅವರು ಮಾತನಾಡುತ್ತಾ,ಈ ಸಂದರ್ಭದಲ್ಲಿ ಆಸ್ಪತ್ರೆಯ ಪ್ರಮುಖರು ಮಾತನಾಡಿ, “ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಕರ್ತರ ಆರೋಗ್ಯ ಕಾಪಾಡುವುದು ನಮ್ಮ ಸಾಮಾಜಿಕ ಜವಾಬ್ದಾರಿ. ಅವರ ಸಂಘದ ಜೊತೆ ಸೇವಾ ಕಾರ್ಯ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ನಮಗೆ ಅತೀವ ಸಂತಸವಿದೆ. ಮುಂದೆಯೂ ಪತ್ರಕರ್ತರ ಆರೋಗ್ಯದ ವಿಷಯದಲ್ಲಿ ಅವರಿಗೊಂದು ವಿಶೇಷ ಆರೋಗ್ಯ ಕಾರ್ಡ್ ಒದಗಿಸಿ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ,” ಎಂದು ಭರವಸೆ ನೀಡಿದರು.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಮೊದಲ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡುತ್ತಾ,“ಪತ್ರಕರ್ತರು, ಛಾಯಾಗ್ರಾಹಕರು, ಟಿವಿ ಮಾಧ್ಯಮದ ಕ್ಯಾಮೆರಾಮನ್‌ಗಳು ಸೇರಿದಂತೆ ಬಹುತೇಕರು ಸಮಯ-ಸಂದರ್ಭ ನೋಡದೆ, ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಸುದ್ದಿಯ ಬೆನ್ನುಹತ್ತಿ ಓಡುವ ಈ ನಿತ್ಯ ಜಂಜಾಟದ‌ ನಡುವೆ ನಮ್ಮ ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸದೆ ಅನಾರೋಗ್ಯಕ್ಕೆ ಈಡಾಗುವ ಸಂದರ್ಭ ಎದುರಾಗುತ್ತಿವೆ ಈ ಹಿನ್ನೆಲೆಯಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಪತ್ರಕರ್ತರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಯೋಜನೆಯನ್ನು ಅನುಷ್ಠಾನಗೊಳಿಸಿದ ಶ್ರೀನಿವಾಸ ಆಸ್ಪತ್ರೆಯ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಅವರಿಗೆ ಸಂಘದ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಮಾತನಾಡಿ, ಎ. ಶ್ಯಾಮ ರಾವ್ ಫೌಂಡೇಶನ್ ಸೇವಾ ಮನೋಭಾವದಿಂದ ಬಹಳಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಅದನ್ನು ಯಾರೂ ಮರೆಯುವಂತಿಲ್ಲ. ಇದೀಗ ಪತ್ರಕರ್ತರ ಸಂಘದೊಂದಿಗೆ ಶ್ರೀನಿವಾಸ ಆಸ್ಪತ್ರೆ ಕೈಜೋಡಿಸಿ ನಮ್ಮ ಸದಸ್ಯರ ಮತ್ತು ಅವರ ಕುಟುಂಬದ ಉಚಿತ ಆರೋಗ್ಯ ತಪಾಸಣೆಗೆ ಎಲ್ಲಾ ರೀತಿಯ ಸಹಕಾರ ನೀಡಿರುವುದು ನಿಜಕ್ಕೂ ಶ್ಲಾಘನೀಯ,ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ
ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ,
ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ,ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ. ಸತ್ಯನಾರಾಯಣ ರೆಡ್ಡಿ
ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲ್ ಕುಮಾರ್, ಶ್ರೀನಿವಾಸ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಉದಯ್ ಕುಮಾರ್ ರಾವ್, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಸುರತ್ಕಲ್,ಸೇರಿದಂತೆ ಆಸ್ಪತ್ರೆಯ ಹಿರಿಯ ವೈದ್ಯರು, ಆಡಳಿತ ವರ್ಗದವರು ಉಪಸ್ಥಿ ತರಿದ್ದರು.ಝರೀನಾ ಕಾರ್ಯ ಕ್ರಮ ನಿರೂಪಿಸಿದರು.

Read More News

Scroll to Top