ಜೂ.೨೭ರಂದು ರೆಡ್‌ಕ್ರಾಸ್‌ನಿಂದರಕ್ತದಾನಿಗಳಿಗೆ ಸನ್ಮಾನ

20.2K Views 6h ago

ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.೨೭ರಂದು ಬೆಳಗ್ಗೆ ೧೦.೩೦ಕ್ಕೆ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ . ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಶಿವಪ್ರಕಾಶ್.ಡಿ.ಎಸ್. ಮತ್ತು ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್.ಎಂ.ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ರಕ್ತದಾನ ಉಪ ಸಮಿತಿ ನಿರ್ದೇಶಕ ಪುಷ್ಪರಾಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
…………………………..

Read More News

Scroll to Top