ಬಿ.ಸಿ.ರೋಡ್ ನ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯೋರ್ವಳಿಗೆ ಮಾರಕಯುಧಗಳಿಂದ ಗಂಭೀರ ಹಲ್ಲೆ ನಡೆಸಿ ಯುವಕ ಪರಾರಿ. ಯುವತಿ ಸ್ಥಳದಲ್ಲೇ ಮೃತ್ಯು. ಯುವಕನ ಹತಾಶೆಗೆ ಒನ್ ವೇ ಲವ್ ಕಾರಣ.

109.8K Views 17 Jul 2026

ವರದಿ:ಜಯಾನಂದ ಪೆರಾಜೆ.
ಬಂಟ್ವಾಳ:ಯುವತಿಯೋರ್ವಳನ್ನು ಮಾರಕಾಯುಧದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನ ನೂತನ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲೇ ಜುಲೈ16ರ ಗುರುವಾರ ಸಂಜೆ ನಡೆದಿದೆ.
ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ಉಳಿಗ್ರಾಮದ ನಿವಾಸಿ ಲಾವಣ್ಯ(21) ‌ಎಂದು ಗುರುತಿಸಲಾಗಿದೆ.
ಇರಿತ ಗೈದು ಪರಾರಿಯಾದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.ಚೇತನ್ ಲಾವಣ್ಯಳನ್ನು ಏಕಮುಖ ವಾಗಿ ಪ್ರೀತಿಸುತ್ತಿದ್ದು ಅದನ್ನು ಆಕೆ ನಿರಾಕರಿಸಿದ್ದೇ ಘಟನೆಗೆ ಕಾರಣವೆನ್ನಲಾಗುತ್ತಿದ್ದು, ಯುವತಿ ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ರಿದ್ದಾಗ ಮಾರಕ ಆಯುಧಗಳಿಂದ ಯುವತಿ ಮೇಲೆ ಚೇತನ್ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಯುವತಿಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ ರೂ ಆಕೆ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಯುವತಿ ಕಲ್ಲಡ್ಕ ಆಸ್ಪತ್ರೆಯೊಂದರಲ್ಲಿ ನರ್ಸ್ ಅಥವಾ ಉದ್ಯೋಗದಲ್ಲಿದ್ದರು ಎಂದು ಹೇಳಲಾಗಿದೆ.ಸತ್ಯಸಂಗತಿ ತನಖೆಯಿಂದ ತಿಳಿದು ಬರಬೇಕಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಅರುಣ್ ಭೇಟಿ ನೀಡಿ ಆರೋಪಿಯನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು ತನಿಖಾ ತಂಡ ರಚಿಸಲಾಗಿದೆ.ಘಟನೆ ನಡೆದು ಕೆಲವೇ ಕ್ಷಣಗಳಲ್ಲಿ ಜಾಲತಾಣಗಳಲ್ಲಿ ಹರಿದಾಡಿದ್ದು ಘಟನೆಯ ಗಂಭೀರತೆಗೆ ಸಾಕ್ಷಿಯಾಗಿದೆ.ಯುವಕ ಯುವತಿಯನ್ನು ಕೊಚ್ಚಿ ಕೊಲೆಮಾಡಿ ಪರಾರಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ .
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪುರಿ ಜಗನ್ನಾಥನ ತೀರ್ಥಯಾತ್ರೆಯಲ್ಲಿದ್ದು ಘಟನೆಯ ಬಗ್ಗೆ ತಿಳಿದುಕೊಂಡು ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.


ಪುರಿ ಜಗನ್ನಾಥ ರಥೋತ್ಸವದಲ್ಲಿದ್ದರೂ ಘಟನೆಯ ಬಗ್ಗೆ ತಕ್ಷಣ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು
ಒಡಿಶಾದ ಪುರಿ ಜಗನ್ನಾಥ ದೇವರ ವಿಶ್ವಪ್ರಸಿದ್ಧ ರಥೋತ್ಸವದಲ್ಲಿ ಭಾಗಿಯಾಗಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಬಂಟ್ವಾಳದಲ್ಲಿ ನಡೆದ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣ ಸ್ಪಂದಿಸಿದ್ದಾರೆ.
ಘಟನೆಯ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು, ಪ್ರಕರಣದ ಆರೋಪಿಯನ್ನು ಯಾವುದೇ ವಿಳಂಬವಿಲ್ಲದೆ ಬಂಧಿಸಿ, ಅನ್ವಯವಾಗುವ ಎಲ್ಲಾ ಕಾನೂನುಗಳಡಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ, ಕಾನೂನಿನ ಚೌಕಟ್ಟಿನಲ್ಲಿಯೇ ತನಿಖೆ ನಡೆಸಿ ಸತ್ಯಾಂಶವನ್ನು ಹೊರತೆಗೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಯ ಜೊತೆಗೆ ಇತರ ವ್ಯಕ್ತಿಗಳ ಪಾತ್ರವೂ ಇದ್ದರೆ, ಆ ಕುರಿತು ಸಮಗ್ರ ತನಿಖೆ ನಡೆಸಿ, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಂಬಂಧಪಟ್ಟ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದ್ದಾರೆ.
ಇದೇ ರೀತಿಯ ದುರ್ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ನಿಗಾವನ್ನು ಮತ್ತಷ್ಟು ಬಲಪಡಿಸಬೇಕು. ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಿಸಿಟಿವಿ ನಿಗಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಹಾಗೂ ಮಹಿಳೆಯರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಅಪರಾಧ ಕೃತ್ಯಗಳಿಗೆ ಅವಕಾಶ ನೀಡದ ವಾತಾವರಣ ನಿರ್ಮಾಣವಾಗಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಆರೋಪಿ ಚೇತನ್ ನ್ನು ಪೊಲೀಸರು ಬಂಧಿಸಿದ್ದಾರೆ. ಆತ ಇಲಿ ಪಾಷಣ ತೆಗೆದುಕೊಂಡದ್ದರಿಂದ ತಪಾಸಣೆಗೆ ಸರಕಾರಿ ಆಸ್ಪತ್ರೆಗೆ ಆತನನ್ನು ಕರೆದುಕೊಂಡು ಹೋಗಲಾಗಿದೆ

Read More News

Scroll to Top