ಆಂಜೆಲೋರ್ ಚರ್ಚ್ ನಲ್ಲಿ ನಾಯಕತ್ವ ತರಬೇತಿ ಶಿಬಿರ

92.7K Views 3w ago

ಮಂಗಳೂರು: ಮಂಗಳೂರಿನ ನಾಗುರಿ ಯಲ್ಲಿ ಇರುವ ಆಂಜೆಲೋರ್ ಚರ್ಚ್ ನಲ್ಲಿ ಕ್ಯಾಥೋಲಿಕ್ ಸಭಾ ಆಂಜೆಲೋರ್ ಘಟಕ ಮತ್ತು ಯುವಜನ ಆಯೋಗದ ನೇತೃತ್ವದಲ್ಲಿ ನಾಯಕತ್ವ ತರಬೇತಿ ಶಿಬಿರ ನಡೆಯಿತು.
ಚರ್ಚ್ ನ ಯುವಜನರಿಗೆ ನಾಯಕತ್ವ ಮತ್ತು ಕಾರ್ಯಕ್ರಮ ನಿರ್ವಹಣೆ ಕುರಿತಂತೆ ತರಬೇತಿ, ಸರಕಾರಿ ನೌಕರಿಗೆ ಸೇರುವ ಬಗ್ಗೆ ಪ್ರೇರೇಪಣೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಫೆಡ್ರಿಕ್ ಮೊಂತೇರೊ, ವಂದನೀಯ ಫಾ . ಅವಿಲ್ ಮಸ್ಕರೇನ್ಹಸ್, ಚರ್ಚ್ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ, ಕ್ಯಾಥೋಲಿಕ್ ಸಭಾ ಅಧ್ಯಕ್ಷ ಪಾವ್ಲ್ ರೊಡ್ರಿಗಸ್ ಅವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮನು ಬಂಟ್ವಾಳ್, ಡೆನ್ನಿಸ್ ಡಿ ಸಿಲ್ವಾ, ಸುರೇಶ್ ಎಂ. ಎಸ್., ಜೂಲಿಯೆಟ್ ಫೆರ್ನಾಂಡಿಸ್ ಅವರು ಭಾಗವಹಿಸಿ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top