SFI ನೂತನ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಸರ್ವಾನುಮತದಿಂದ ಆಯ್ಕೆ

108.6K Views 2w ago

ಭಾರತ ವಿದ್ಯಾರ್ಥಿ ಫೆಡರೇಶನ್ (SFI)ನ ದ.ಕ.ಜಿಲ್ಲಾ ಸಮಾವೇಶವು ನಗರದ ಡಾನ್ ಬಾಸ್ಕೋ ಹಾಲ್ ನಲ್ಲಿ ಬಿ ಕೆ ಇನಾಜ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ಜಿಲ್ಲೆಯ ಜನಪದ ವಿದ್ವಾಂಸರೂ,ನಿವೃತ್ತ ಪ್ರಾಂಶುಪಾಲರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಸಮಾವೇಶವನ್ನು ಉದ್ಘಾಟಿಸಿದರೆ,SFI ಕರ್ನಾಟಕ ರಾಜ್ಯಾಧ್ಯಕ್ಷರಾದ ಶಿವಪ್ಪ ಅಂಬ್ಲಿಕಲ್ ರವರು ಇಡೀ ಸಮಾವೇಶವು ಸುಸೂತ್ರವಾಗಿ ನಡೆಯುವಂತೆ ಮಾರ್ಗದರ್ಶನ ನೀಡಿದರು. ಸಮಾವೇಶವು ಮುಂದಿನ ಸಾಲಿಗೆ ನೂತನ ದ.ಕ‌.ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.
ನೂತನ ಅಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ ಹಾಗೂ ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರುರವರು ಸರ್ವಾನುಮತದಿಂದ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಲಿಖಿತ್ ವಾಮಂಜೂರು, ಅಲ್ಮಾಸ್, ರೋನ್ ಸನ್ ಡಿಸೋಜ, ಅವಿಶಾ ಡಿಸೋಜ ಪಂಜಿಮೊಗರು,ಸಮನ್ವಿ ಬಜಾಲ್,ಪ್ರೇಮ್ ಮದ್ಯ, ಮಿನಹಾಜ್ ದೇರಳಕಟ್ಟೆ, ಸಹಕಾರ್ಯದರ್ಶಿಗಳಾಗಿ ಚಿರಾಗ್ ಕುತ್ತಾರ್,ಇಶಾನ್, ಶ್ರಮಾ,ಇಂಚರಾ ಎಸ್ ಬಜಾಲ್,ಸನನ್ವಿ ಬಜಾಲ್, ನೋಯಲ್ ಸ್ಟೀಫನ್ ಡಿಸೋಜ, ಶಯಾನ್,ರಂಜಿತ್ ಕೊಯ್ಯೂರುರವರನ್ನು‌ ಆರಿಸಲಾಯಿತು.ಹಾಗೂ ಜಿಲ್ಲೆಯ ವಿವಿಧ ಕಾಲೇಜ್ ಗಳಿಂದ 35 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top