ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

8.5K Views 2h ago

ಬಂಟ್ವಾಳ: ಮಾಜಿ ಸಚಿವ ಬೆಳ್ಳಿಪ್ಪಾಡಿ ಬಿ. ರಮಾನಾಥ ರೈ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ ಇಂದು (ಸೆ.13, ಭಾನುವಾರ) ಸಂಜೆ 3 ಗಂಟೆಗೆ ಬಿ.ಸಿ. ರೋಡ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟುಹಬ್ಬ ಆಚರಣಾ ಸಮಿತಿ, ದಕ್ಷಿಣ ಕನ್ನಡ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು . ನಾಲ್ಕುವರೆ ದಶಕಗಳ ಅವರ ರಾಜಕೀಯ ಅನುಭವ,ಸಾಮಾಜಿಕ ಮತ್ತು ನಿಸ್ವಾರ್ಥ ಜನಸೇವೆಯನ್ನು ಪರಿಗಣಿಸಿ ಈ ಹುಟ್ಟುಹಬ್ಬದ ಸಂಭ್ರಮವನ್ನು ಅಭಿಮಾನಿಗಳು ಆಚರಿಸಿದರು.ಈ ಸಂದರ್ಭದಲ್ಲಿ ರೈಯವರ ಆಪ್ತರಾದ ಪಿಯೂಸ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಎಂ. ಎಸ್. ಮೊಹಮ್ಮದ್,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತ ಗಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ರೈಯವರ ಅಭಿಮಾನಿಗಳು ಉಪಸ್ಥಿತರಿದ್ದರು
ಮಾನವೀಯತೆಯೊಂದಿಗೆ ಹುಟ್ಟುಹಬ್ಬದ ಆಚರಣೆ
ಮಾಜಿ ಸಚಿವ ರಮಾನಾಥ ರೈ ಅಂದರೆ ಅಪಾರ ಅಭಿಮಾನಿಗಳ ಅಚ್ಚುಮೆಚ್ಚಿನ ಬೇಬಿಯಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರಿನ ಪ್ರಜ್ಞಾಶ್ರಮದ ವಿಕಲಚೇತನ ವಿದ್ಯಾರ್ಥಿಗಳಿಗೆ ರೋಶನ್ ರೈ ಅವರು ಇಂದು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಿದರು.
ಕೇಕ್ ಕತ್ತರಿಸುವ ಸಂಭ್ರಮಕ್ಕೆ ಸೀಮಿತವಾಗದೆ, ಅಶಕ್ತ ಮಕ್ಕಳೊಂದಿಗೆ ಸಂತಸ ಹಂಚಿಕೊಂಡ ಈ ಕಾರ್ಯಕ್ರಮವು ಮಾನವೀಯತೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಯಿತು. “ಸೇವೆಯೇ ಸಂಭ್ರಮ, ಮಾನವೀಯತೆಯೇ ನಿಜವಾದ ಆಚರಣೆ” ಎಂಬ ಸಂದೇಶದೊಂದಿಗೆ ಈ ಕಾರ್ಯಕ್ರಮ ನಡೆಯಿತು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top