ಕರಾವಳಿ ಸಮಗ್ರ ಅಭಿವೃದ್ಧಿಗೆ ಸಂಪುಟ ಸಭೆ ನೆರವಾಗಲಿ: ಹರೀಶ್ ಕುಮಾರ್

101.1K Views 4w ago

ಮಂಗಳೂರು: ಕರಾವಳಿ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಆಯೋಜಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.
ಸೆ. 16ರ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ತುಳು ಭಾಷೆಗೆ ಎರಡನೇ ರಾಜ್ಯಭಾಷಾ ಸ್ಥಾನಮಾನ, ಪ್ರವಾಸೋದ್ಯಮ ಅಭಿವೃದ್ಧಿ, ಮೀನುಗಾರಿಕೆ ಮತ್ತು ಬ್ಯಾರಿ ಸಮುದಾಯದ ಏಳಿಗೆ ಕುರಿತು ಚರ್ಚೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ ಎಂದರು.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐತಿಹಾಸಿಕ ವೀರರಾದ ಕೋಟಿ-ಚೆನ್ನಯರ ಹೆಸರನ್ನು ಇಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಮಂಗಳೂರಿನಲ್ಲಿ ಹೆಚ್ಚುತ್ತಿರುವ ನೈಟ್ ಲೈಫ್ ಮತ್ತು ಡ್ರಗ್ಸ್ ಜಾಲದ ಬಗ್ಗೆಯೂ ಸರ್ಕಾರ ಗಂಭೀರ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಪದ್ಮರಾಜ್ ಪೂಜಾರಿ ಅವರ ಪದಗ್ರಹಣ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸದಾಶಿವ ಉಳ್ಳಾಲ್, ಅಪ್ಪಿ, ಶುಭೋದಯ ಆಳ್ವ, ಸುಹಾನ್ ಆಳ್ವ, ನವಾಜ್ ಮತ್ತಿತರರು ಇದ್ದರು

Read More News

Scroll to Top