ಸಮಾನತೆ ಸಂವಿಧಾನದ ಮೂಲ ಆಶಯ-ಶಾಸಕ ಅಶೋಕ್ ಕುಮಾರ್ ರೈ

116.1K Views 3w ago

ಮಂಗಳೂರು : ಸಮಾನತೆ ಭಾರತೀಯ ಸಂವಿಧಾನದ ಮೂಲ ಆಶಯವಾಗಿದೆ. ಪ್ರಜೆಗಳಿಗೆ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯ ಕಲ್ಪಿಸಿರುವ ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಎಂದು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ನಗರದ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಅಳವಡಿಸಿದ ಭಾರತ ಸಂವಿಧಾನದ ಪೀಠಿಕೆ ಫಲಕವನ್ನು ಶುಕ್ರವಾರ ಅನಾವರಣಗೊಳಿಸಿ ಮಾತನಾಡಿದ ಅವರು “
ಪತ್ರಿಕಾ ರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದ್ದು, ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸಂವಿಧಾನದ ಪೀಠಿಕೆ ಫಲಕ ಅಳವಡಿಸಿದ್ದು ಮಾದರಿ ಕಾರ್ಯವಾಗಿದೆ ‘ಎಂದು ಶ್ಲಾಘಿಸಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ
ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ
ವಿಲ್ಫ್ರೆ ಡ್ ಡಿಸೋಜಾ, ಕೋಶಾಧಿಕಾರಿ ವಿಜಯ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಕುಮಾರ್.ಎಂ., ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.

Read More News

Scroll to Top