ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶ್ರೀ ಬಸವರಾಜು ಅವರಿಗೆ ಮಂಗಳೂರು ವಕೀಲರ ಸಂಘದಿಂದ ಬೀಳ್ಕೊಡುಗೆ

118.1K Views 2w ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀ ಬಸವರಾಜು ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್‌ ಆವರಣದಲ್ಲಿರುವ ಕಾನ್ಫರೆನ್ಸ್ ಹಾಲ್‌ನಲ್ಲಿ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಕೆ. ಶೇನವ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಅಶೋಕ್ ಅರಿಗ, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರಾದ ಎಂ. ಪಿ. ನೊರೋನ್ಹಾ, ಪ್ರಧಾನ ಕಾರ್ಯದರ್ಶಿ ಗೌತಮ್ ಬಿ.ಪಿ., ಕೋಶಾಧಿಕಾರಿ ಶ್ರೀಮತಿ ರೇಖಾ, ಜೊತೆ ಕಾರ್ಯದರ್ಶಿ ರವಿಕುಮಾರ್ ವಿ. ಸೇರಿದಂತೆ ನ್ಯಾಯಾಧೀಶರು ಹಾಗೂ ಹಿರಿಯ ಮತ್ತು ಕಿರಿಯ ವಕೀಲರು ಉಪಸ್ಥಿತರಿದ್ದರು.
ನ್ಯಾಯಾಂಗ ಕ್ಷೇತ್ರದಲ್ಲಿ ಶ್ರೀ ಬಸವರಾಜು ಅವರು ಸಲ್ಲಿಸಿದ ಸೇವೆ ಹಾಗೂ ವಕೀಲರು ಮತ್ತು ನ್ಯಾಯಾಂಗದ ನಡುವಿನ ಉತ್ತಮ ಬಾಂಧವ್ಯವನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಅವರ ನಿವೃತ್ತಿ ಜೀವನ ಸುಖ, ಶಾಂತಿ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಮಂಗಳೂರು ವಕೀಲರ ಸಂಘದ ವತಿಯಿಂದ ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಧೀಶರು ಹಾಗೂ ಅಪಾರ ಸಂಖ್ಯೆಯ ಹಿರಿಯ ಮತ್ತು ಕಿರಿಯ ವಕೀಲರು ಭಾಗವಹಿಸಿ ಶ್ರೀ ಬಸವರಾಜು ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.

Read More News

Scroll to Top