ಅಕ್ಟೋಬರ್‌ 11: ಮೂಲ್ಕಿ ಬಿಲ್ಲವ ಸಂಘದಲ್ಲಿ ಪ್ರಪ್ರಥಮ ಸಾಮೂಹಿಕ ದಾಂಡಿಯ ನೃತ್ಯ ಸಂಯೋಜನೆ.

90.7K Views 1d ago

ಮೂಲ್ಕಿ: 93 ವರ್ಷದ ಇತಿಹಾಸ ಇರುವಂತಹ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಅಕ್ಟೋಬರ್ 11ರಿಂದ ಆರಂಭಗೊಳ್ಳುವ ನವರಾತ್ರಿ ಉತ್ಸವದ ವಿಶೇಷ ಆಕರ್ಷಣೆಯಾಗಿ ಅಕ್ಟೋಬರ್ 11ರಂದು ಭಾನುವಾರ ಸಂಜೆ 8 ಗಂಟೆಯಿಂದ 10 ಗಂಟೆಯವರೆಗೆ ಸಾಮೂಹಿಕ ದಾಂಡಿಯ ನೃತ್ಯ ಕಾರ್ಯಕ್ರಮವನ್ನು ಸಂಯೋಜಿಸಲಾಗಿದೆ.
ಮೂಲ್ಕಿಯಲ್ಲಿ ಪ್ರಪ್ರಥಮವಾಗಿ ಸಂಯೋಜಿಸಲಾಗಿರುವ ದಾಂಡಿಯ ನೃತ್ಯ ಕಾರ್ಯಕ್ರಮವನ್ನು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷರಾಗಿರುವ ಡಾ. ರಾಜಶೇಖರ್ ಕೋಟ್ಯಾನ್ ಅವರು ವಿಶೇಷವಾಗಿ ಚಾಲನೆ ನೀಡಲಿದ್ದಾರೆ.
ಮೂಲ್ಕಿ ಪರಿಸರದ ಜನತೆಗೆ ಮುಕ್ತವಾಗಿ ಪ್ರವೇಶವಿದ್ದು ಸಾಮೂಹಿಕ ದಾಂಡಿಯ ನೃತ್ಯ ಮಾಡುವವರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ, ಕೋಲಾಟದ ಕೋಲುಗಳೊಂದಿಗೆ ಭಾಗವಹಿಸಬೇಕು, ಶಿಸ್ತು, ಸಂಯಮದಿಂದ ಈ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಮಹಿಳೆಯರು, ಪುರುಷರು, ಮಕ್ಕಳಿಗೆ ಪ್ರತ್ಯೇಕವಾದ ನೃತ್ಯ ಗುಂಪುಗಳಾಗಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಘದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top