ಅ.14ರಂದು ಅಕ್ಷರ ಸಭಾಂಗಣ ಉದ್ಘಾಟನೆ

23.4K Views 13h ago

ಮಂಗಳೂರು: ಮಂಗಳೂರಿನ ಪತ್ರಿಕಾ ಭವನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಅಕ್ಷರ” ಸಭಾಂಗಣದ ಉದ್ಘಾಟನಾ ಸಮಾರಂಭ ಅ.14ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ನೂತನ ಸಭಾಂಗಣ ಉದ್ಘಾಟಿಸಲಿದ್ದಾರೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ನಾಮಫಲಕ ಅನಾವರಣಗೊಳಿಸಲಿದ್ದು, ಪ್ರೆಸ್ ಕ್ಲಬ್ ಅಧ್ಯಕ್ಷ
ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ
ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top