ಪಾಲ್ದನೆ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ

728 Views 24m ago

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.
ಚರ್ಚ್ ನ ಎಲ್ಲಾ 12 ವಾರ್ಡುಗಳ ವ್ಯಾಪ್ತಿಯ 125 ಮಂದಿ ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ ಹಿರಿಯ ನಾಗರಿಕರು ಚರ್ಚ್ ಗೆ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ಅವರ ಜ್ಞಾನ ಅಪಾರ. ಅವರು ತಮ್ಮ ಮಾರ್ಗದರ್ಶನವನ್ನು ಮುಂದಿನ ಜನಾಂಗಕ್ಕೆ ನೀಡುತ್ತಾ ಇರ ಬೇಕೆಂದರು.
ಕಾರ್ಯಕ್ರಮದಲ್ಲಿ ಸಹಾಯಕ ಧರ್ಮ ಗುರು ವಂದನೀಯ ಫಾ. ಜೋಸೆಫ್ ಕುವೆಲ್ಲೊ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ, ವಾರ್ಡ್ ಮುಖ್ಯಸ್ಥರ ಪರವಾಗಿ ಸಂತ ಕ್ಸೇವಿಯರ್ ವಾರ್ಡಿನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಕುಟುಂಬಗಳ ಹಿತಾಸಕ್ತಿ ಆಯೋಗದ ಸಂಚಾಲಕಿ ಸೆಲಿನ್ ಡಿ ಸೋಜಾ ಸ್ವಾಗಸಿದರು. ಪ್ರೆಸಿಲ್ಲಾ ಫೆರ್ನಾಂಡಿಸ್ ಧನ್ಯವಾದ ಸಲ್ಲಿಸಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕ ಮಾರಿಯೋ ರೇಗೊ ಕಾರ್ಯಕ್ರಮ ನಿರೂಪಿಸಿದರು.

Read More News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಪತ್ನಿ ಅಗಲಿಕೆ: ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿ ಇಂದು ಬೆಳಿಗ್ಗೆ (ಅಕ್ಟೋಬರ್ 25) ಗಂಟೆ 10 ರಿಂದ 12ರವರೆಗೆ ಅಂತಿಮ ದರ್ಶನ ಮತ್ತು 12.30ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ

Scroll to Top