ರಾಜ್ಯಮಟ್ಟದ ಸಹಕಾರ ಸಪ್ತಾಹ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆ

117.1K Views 5d ago

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ ೭೩ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ
ಇವರು ಆಯ್ಕೆಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಪತ್ರಿಕೋದ್ಯಮದಲ್ಲಿ ೩ ದಶಗಳ ಅನುಭವ ಇರುವ ಪಿ.ಬಿ.ಹರೀಶ್ ರೈ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ, ಐನೆಕಿದು-ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಿಜಯವಾಣಿ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿದ್ದಾರೆ.
೭೩ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನ.೨೦ರಂದು ಬೆಳಗ್ಗೆ ೧೦ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

Read More News

ಇಂದು (ನವೆಂಬರ್ 22)ರಂದು ಕನ್ನಡ ಸಾಹಿತ್ಯ ಪರಿಷತ್ತು ದರ್ಬೆ ಪುತ್ತೂರು ಕಚೇರಿಯಲ್ಲಿ ಮಿತ್ರoಪಾಡಿ ಜಯರಾಮ ರೈ ಅಬುದಾಭಿ ನಿರ್ಮಾಣದ ನಾರಾಯಣ ಕುಂಬ್ರ ಸಾಹಿತ್ಯದ ಮಣ್ಣ ಘಮದ ಗ್ರಾಮ ಸಾಹಿತ್ಯ ಸಂಭ್ರಮ ಎಂಬ ಯಕ್ಷಗಾನ ಶೈಲಿಯ ಧ್ವನಿ ಸುರುಳಿ ಬಿಡುಗಡೆ

ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾಲಕತ್ವದ ಸ್ಟೇಟ್ ಬ್ಯಾಂಕ್ ನಲ್ಲಿರುವ ಹೋಟೆಲ್ ಸ್ವಾಗತ್ ನ ಸಪ್ಲೈಯರ್, ಎಂಪಿ ಎಂಎಲ್ ಎ ನ್ಯೂಸ್ 11ನೇ ಸೌಹಾರ್ದ ಸಂಗಮದಲ್ಲಿ ಯುವರತ್ನ ಪ್ರಶಸ್ತಿ -2020 ಪುರಸ್ಕೃತ ಯುವ ಸಮಾಜ ಸೇವಕ ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ನೇತೃತ್ವ ದಲ್ಲಿ ದ.ಕ. ಜಿಲ್ಲಾ ಪ್ರಶಸ್ತಿ-2026 ಪ್ರಧಾನ.

Scroll to Top