ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೂತನ ಅಧಿಕೃತ ನಿವಾಸ ‘ಗಂಗಾ’ದ ಗೃಹಪ್ರವೇಶ ಸಮಾರಂಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಇಂದು ಭಾಗವಹಿಸಿ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳನ್ನು ಸಲ್ಲಿಸಿದರು.
ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ನಾಯಕತ್ವದ ಛಾಪು ಮೂಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ. ರಮಾನಾಥ ರೈ ಅವರ ಉಪಸ್ಥಿತಿ ಸಮಾರಂಭಕ್ಕೆ ವಿಶೇಷ ಮೆರುಗು ನೀಡಿತು. ಪಕ್ಷದ ಹಿರಿಯ ನಾಯಕನಾಗಿ ಕಾಂಗ್ರೆಸ್ ಸಂಘಟನೆಯೊಂದಿಗೆ ನಿರಂತರ ಒಡನಾಟ ಹೊಂದಿರುವ ರೈ ಅವರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಗಣ್ಯರೊಂದಿಗೆ ಆತ್ಮೀಯವಾಗಿ ಬೆರೆತು ಸಮಾರಂಭದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮರಾಜ್ ಆರ್. ಪೂಜಾರಿ, ಪಕ್ಷದ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಶಬೀರ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






















































































































































































