ಡಾ.ಸುಧಾಕರ್ ಶೆಟ್ಟಿ (ಮಕ್ಕಳ ತಜ್ಞರು, ಪುಣೆ -ಮೂಡುಬಿದಿರೆ)ಯವರ ಬಗ್ಗೆ ಸಂಕ್ಷಿಪ್ತ ಪರಿಚಯ.

103.8K Views 12 Feb 2024

ಮಂಗಳೂರು :ಡಾ. ಸುಧಾಕರ್ ಶೆಟ್ಟಿ ಪುಣೆ -ಮೂಡಬಿದ್ರಿ ಅವರು ಕಳೆದ 36 ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದು, ಪುಣೆಯಲ್ಲಿ ತನ್ನದೇ ಮಾಲೀಕತ್ವದ ಬೇಬಿ ಫ್ರೆಂಡ್ ಎoಬ ಸುಸಜ್ಜಿತವಾದ ಮಕ್ಕಳ ಕ್ಲಿನಿಕ್ ನ್ನು ಹೊಂದಿದ್ದಾರೆ.

ಇದರ ಜೊತೆಗೆ, ಪುಣೆ ಪೊಲೀಸ್ ಹಾಸ್ಪಿಟಲ್, ಸ್ಟೇಟ್ ರಿಸರ್ವ್ ಪೊಲೀಸ್ ಫೋರ್ಸ್ ಹಾಸ್ಪಿಟಲ್, ರೆಡ್ ಕ್ರಾಸ್ ಸೊಸೈಟಿ ಮತ್ತು ಭಾರತೀಯ ವಿದ್ಯಾ ಪೀಠ ವಿಶ್ವ ವಿದ್ಯಾನಿಲಯದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಮಕ್ಕಳ ಆರೈಕೆ ಮತ್ತು ಕೋವಿಡ್ ಪಿಡುಗು ಸಂದರ್ಭದಲ್ಲಿ 1,500 ಕ್ಕೂ ಹೆಚ್ಚು ಕನ್ನಡಿಗರಿಗೆ ತನ್ನ ವೈದ್ಯಕೀಯ ತಂಡದ ಮೂಲಕ ಅತ್ಯುತ್ತಮ ಚಿಕಿತ್ಸೆ ನೀಡುವುದರೊಂದಿಗೆ ಇಡೀ ರಾಷ್ಟ್ರದ ಗಮನ ಸೆಳೆದಿದ್ದಾರೆ. ಅವರು ಮೂಡಬಿದ್ರೆಯಲ್ಲಿ ಮೊಬೈಲ್ ಪಿಡಿಯಾಟ್ರಿಕ್ ಕ್ಲಿನಿಕ್ ಆರಂಭಿಸಿ ವಿಸ್ತಾರ ವೈದ್ಯಕೀಯ ಸಮಾಜ ಸೇವೆ ಮೂಲಕ ಮನೆ ಮಾತಾಗಿದ್ದಾರೆ.

ಪ್ರಶಸ್ತಿಗಳು : 1.ಡಾ.ಸುಧಾಕರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಸತತ ಮೂರು ಬಾರಿ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್ ದೊರಕಿದೆ. 2. ಪುಣೆ ಕಂಟೋನೋಮೆಂಟ್ ಬೋರ್ಡ್ ನಿಂದ ಶ್ರೇಷ್ಠತೆಯ ಪ್ರಮಾಣ ಪತ್ರ. 3. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ -2022. 4. ಚಾರ್ ಸಹಿಬಜಾದೆ ಅವಾರ್ಡ್

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top