ಪತ್ರಿಕಾ ಪ್ರಕಟಣೆಜೆ: ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ (ಗೇಲ್-ಇಂಡಿಯಾ) ನಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

111.4K Views 20 Feb 2024

ಇಂದು ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top