ಅಮೃತಾನಂದಮಯಿ ಮಠದಲ್ಲಿ ಯೋಗಶಿಬಿರ ಉದ್ಘಾಟನೆ

110.8K Views 20 Feb 2024

ಮಂಗಳೂರು: ನಗರದ ಬೋಳೂರು ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಬಳಗದವರಿಂದ ಯೋಗತರಬೇತಿ ಶಿಬಿರವನ್ನು ಸೋಮವಾರ ದಿನಾಂಕ 19ರಂದು ಉದ್ಘಾಟಿಸಲಾಯಿತು. ಮಠದ ದೇವಸ್ಥಾನ ಸಮಿತಿ ಸದಸ್ಯರಾದ ಮುರಳೀಧರ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶರೀರ ಹಾಗೂ ಮನಸ್ಸಿನ ಸ್ವಾಸ್ಥ್ಯ ರಕ್ಷಣೆಯೊಂದಿಗೆ ದೀರ್ಘಾಯುಷ್ಯ ಹೊಂದಲು ಯೋಗ ಬಹಳ ಸರಳ ವಿಧಾನ. ಗೋಪಾಲಕೃಷ್ಣ ದೇಲಂಪಾಡಿಯವರು ಸಾರ್ವಜನಿಕರ ಹಿತದೃಷ್ಟಿಯಿಂದ ಹಲವಾರು ವರ್ಷಗಳಿಂದ ಶಿಬಿರಗಳನ್ನು ನಡೆಸುತ್ತಿದ್ದಾರೆ. ಅವರ ಈ ಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು.

ಪ್ರಾರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತಾಡಿದ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ್ ಪೆರ್ಲ ಅವರು ಮಾತಾ ಅಮೃತಾನಂದಮಯಿ ಮಠವು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯ ಉದ್ದೇಶದಿಂದ ನಡೆಸುತ್ತಿರುವ ಕಾರ್ಯಕ್ರಮಗಳಲ್ಲಿ ಯೋಗವೂ ಪ್ರಮುಖವಾಗಿದೆ. ದೇಲಂಪಾಡಿ ಪ್ರತಿಷ್ಠಾನದ ಜೊತೆಗೆ ನಡೆಸುತ್ತಿರುವ ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು.
ಡಾ.ದೇವದಾಸ್ ಪುತ್ರನ್ ವಂದಿಸಿದರು. ಸೇವಾ ಸಮಿತಿಯ ಪದಾಧಿಕಾರಿಗಳಾದ ಭರತ್ ಕುಮಾರ್ ಎರ್ಮಾಳ್, ನಿರಂಜನ್ ಅಡ್ಯಂತಾಯ, ಆಯುಷ್ ವೈದ್ಯಾಧಿಕಾರಿ ಡಾ.ಶ್ರೀದೇವಿ, ಶ್ರೀಮತಿ ವೀಣಾ ಮಾರ್ಲ, ಭಾರತಿ ಎಸ್.ರಾವ್, ಕುಮಾರ್ ಶೆಣೈ, ಸ್ಕಂದ, ದಾಮೋದರ್ , ಹಾಗೂ ಗೋಪಾಲಕೃಷ್ಣ
ದೇಲಂಪಾಡಿಯವರ ಶಿಷ್ಯರು ಮತ್ತು ಅಮ್ಮನ ಭಕ್ತರು ಭಾಗವಹಿಸಿದ್ದರು.ಯೋಗ ತರಬೇತಿಯನ್ನು ಪಡೆಯಲು ಆಸಕ್ತರಿಗೆ ಪ್ರವೇಶಾವಕಾಶ ಇರುತ್ತದೆ. ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನೋಂದಣಿ ಮಾಡಬಹುದಾಗಿದೆ ಎಂದು ಡಾ.ವಸಂತಕುಮಾರ್ ಪೆರ್ಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top