ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ನಿಂತ ಬಿಎಸ್ ವೈ. ವಿರೋಧವಿರುವ ಹಾಲಿ 7 ಮಂದಿ ಬಿಜೆಪಿ ಸಂಸದರ ಪರ ಯಡಿಯೂರಪ್ಪ ಬ್ಯಾಟಿಂಗ್. ನಾಳೆ ಸಂಜೆಯೊಳಗೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್. ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಹೆಸರು ಶಿಫಾರಸ್ಸು.

110.9K Views 9 Mar 2024

ಬ್ರೇಕಿಂಗ್ ನ್ಯೂಸ್ :
ಡಾ. ಅಶೋಕ್ ಶೆಟ್ಟಿ. ಬಿ. ಎನ್.

ಬೆಂಗಳೂರು :ಕಳೆದ ಒಂದು ವಾರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗುವುದಿಲ್ಲವೆಂಬ ಸುದ್ದಿ ಹಬ್ಬಿದ್ದು, ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡದಿಂದ ಎಂಪಿ ಟಿಕೆಟ್ ಫೈನಲ್ ಆಗಿದೆ ಎಂಬ ಬಗ್ಗೆ ಸುದ್ದಿಯಾಗಿತ್ತು. ಆದರೆ, ಇದೆಲ್ಲ ಗಾಸಿಪ್ ಸುದ್ದಿ ಎಂದು ಬಿಜೆಪಿ ಹೈ ಕಮಾಂಡ್ ನ ಆಪ್ತ ಮೂಲವೊಂದು mpmla’s news tvಗೆ ತಿಳಿಸಿದೆ. ಅದರ ಪ್ರಕಾರ, ಬಿ ಎಸ್ ವೈ ಅವರು ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ನಿಂತಿದ್ದಾರೆ. ಟಿಕೆಟ್ ಕೊಡಬಾರದೆಂದು ವಿರೋಧವಿರುವ ಬಿಜೆಪಿಯ 7 ಮಂದಿ ಹಾಲಿ ಸಂಸದರ ಪರ ನಿಂತು ಯಡಿಯೂರಪ್ಪ ಅವರು ಬ್ಯಾಟಿಂಗ್ ನಡೆಸುತ್ತಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಡಿ. ವಿ. ಸದಾನಂದ ಗೌಡ, ಮಂಡ್ಯದಲ್ಲಿ ಜೆಡಿಎಸ್ ಪರ, ಮೈಸೂರಿನಲ್ಲಿ ಪ್ರತಾಪ್ ಸಿಂಹ ಪರ,ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗಡೆ ಪರ, ಬೀದರನಲ್ಲಿ ಭಗವಂತ ಖೂಬ ಪರ,ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಪರ,ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಹೆಸರು ಶಿಫಾರಸ್ಸು ಮಾಡಿ ಬಿಜೆಪಿ ಹೈ ಕಮಾಂಡ್ ಗೆ ತಾನು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಸ್ಪಷ್ಟವಾಗಿ ಸೂಚಿಸಿದ್ದಾರೆ. ನಾಳೆ ಮಾರ್ಚ್ 10 ರಂದು ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮೋದಿ, ನಡ್ಡಾ, ಅಮಿತ್ ಶಾ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಬಿ ಎಸ್ ವೈ ಅವರು ಪಾಲ್ಗೊ ಳ್ಳ ಲಿದ್ದಾರೆ. ನಾಳೆ ಸಂಜೆಯೊಳಗೆ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ ಆಗಲಿದೆ. ಕರ್ನಾಟಕದಲ್ಲಿ ಬಿಎಸ್ ವೈ ಸೂಚಿಸಿದ ಅಭ್ಯರ್ಥಿಗಳಿಗೆ ಟಿಕೆಟ್ ನೂರಕ್ಕೆ ನೂರರಷ್ಟು ಗ್ಯಾರಂಟಿಯಾಗಿದ್ದು, ಬಿ. ಎಲ್. ಸಂತೋಷ್ ಅವರ ಕೃಪಾಕಟಾಕ್ಷವೂ ಕಟೀಲ್ ಪರವಿರುವುದ್ದರಿಂದ ನಳಿನ್ ಕುಮಾರ್ ಕಟೀಲು ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ 4 ನೇ ಬಾರಿಗೆ ಬಿಜೆಪಿಯಿಂದ ಎಂಪಿ ಟಿಕೆಟ್ ಪಡೆದು ಸ್ಪರ್ಧಿಸುವುದು ಸ್ಪಷ್ಟ ಹಾಗೂ ನೂರಕ್ಕೆ ನೂರರಷ್ಟು ಸತ್ಯವೆಂದು ವರದಿಯಾಗಿದೆ. ವಿವಾದ ರಹಿತ, ನಿಷ್ಕಲ್ಮಶ ಮನಸ್ಸಿನ ನೇರ ನಡೆ ನುಡಿಯ ನಿಷ್ಕಳಂಕ ನಾಯಕರಾಗಿರುವ ಕಟೀಲ್ ಅವರು ಯಾವುದೇ ಹಗರಣವಿಲ್ಲದ, ಭ್ರಷ್ಟಾಚಾರವಿಲ್ಲದ ಜನಪರ, ಜನ ಮೆಚ್ಚಿದ ನಾಯಕರಾಗಿದ್ದಾರೆ. 2009 ರಿಂದ 2023 ರ ವರೆಗೆ ಸತತವಾಗಿ 3 ಅವಧಿಗಳಲ್ಲಿ ದಕ್ಷಿಣ ಕನ್ನಡದ ಎಂಪಿಯಾಗಿ ಒಂದು ಲಕ್ಷ ಕ್ಕೂ ಅಧಿಕ ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರದಿಂದ ತಂದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡಲು ಶಕ್ತಿ ಮೀರಿ ದುಡಿದ್ದಾರೆ.ಮಂಗಳೂರನ್ನು ಸ್ಮಾರ್ಟ್ ಸಿಟಿಯಾಗಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅತಿ ಹೆಚ್ಚು ಬಾರಿ ರಾಜ್ಯ ಪ್ರವಾಸ ಮಾಡಿ ರಾಜ್ಯದ ಮೂಲೆ ಮೂಲೆಗಳನ್ನು ಸುತ್ತಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸಿ ಬೃಹತ್ ಶಕ್ತಿಶಾಲಿ ಹೆಮ್ಮರವಾಗಿಸಿದ್ದಾರೆ. ಈ ಸಲ ಅವರು ಸ್ಪರ್ಧಿಸಿದಲ್ಲಿ ಮೂರು ಲಕ್ಷ ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಪ್ರಚಂಡ ಜಯಭೇರಿ ಬಾರಿಸುವುದು ಗ್ಯಾರಂಟಿ ಎಂಬ ಸಮೀಕ್ಷೆ ವ್ಯಕ್ತವಾಗಿದೆ. ನಳಿನ್ ಕುಮಾರ್ ಕಟೀಲ್ ಅವರು 4 ನೇ ಬಾರಿಗೆ ಸ್ಪರ್ಧಿಸಿ ಎಂಪಿಯಾಗಿ ಜಯಭೇರಿ ಬಾರಿಸಲೆಂದು mp mla’s news tv ಶುಭ ಹಾರೈಸುತ್ತದೆ.

Read More News

Scroll to Top