ಭಾರತದ ಅಭಿವೃದ್ಧಿ ಪರ್ವಕ್ಕೆ ಮತ್ತೊಮ್ಮೆ ಮೋದಿ ಸರಕಾರ ಅನಿವಾರ್ಯ: ಕ್ಯಾ. ಗಣೇಶ್ ಕಾರ್ಣಿಕ್

113.2K Views 22 Mar 2024

ಮಂಗಳೂರು: ಮುಂಬರುವ 18ನೇ ಲೋಕಸಭಾ ಚುನಾವಣೆಯು ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಇದು ಪರಿಣಾಮಕಾರಿ ಹೆಜ್ಜೆಯಾಗಲಿದೆ. ಕಳೆದ 10 ವರ್ಷಗಳಲ್ಲಿ ಮಾಡಲಾದ ಅಭಿವೃದ್ಧಿಪರ ಆಡಳಿತದ ಮುಂದುವರಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೊಮ್ಮೆ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೆ ಬರಬೇಕಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ಅವರು ಇಂದು ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರ ಸಮರ್ಥ ಹಾಗೂ ದಕ್ಷ ಆಡಳಿತವು ಕಳೆದ 10 ವರ್ಷಗಳಲ್ಲಿ ಜನಮಾನಸದಲ್ಲಿ ಅಗಾಧ ಪ್ರಭಾವ ಬೀರಿದೆ. ಜತೆಗೆ ದೇಶದಲ್ಲಿ ಅಭಿವೃದ್ಧಿಯ ಹೊಸ ಯುಗವನ್ನೇ ಪ್ರಾರಂಭಿಸಿದೆ. ಸಬ್‌ ಕಾ ಸಾಥ್, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ಮತ್ತು ಸಬ್‌ ಕಾ ಪ್ರಯಾಸ್‌ ಎನ್ನುವ ನೀತಿಯೊಂದಿಗೆ ಕಳೆದ ಹಲವು ದಶಕಗಳ ಒಡೆದಾಳುವ ನೀತಿಗೆ ತಡೆ ಹಾಕಿ, ದೇಶದ ಹಿತಾಸಕ್ತಿಯೇ ಪರಮೋಚ್ಚವಾಗಿ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಭಾರತೀಯ ಸಾಂಸ್ಕೃತಿಕ ಮೌಲ್ಯಗಳ ಆಧಾರದಲ್ಲಿ ಭಾರತದ ಅಭಿವೃದ್ಧಿಯನ್ನು ಕಳೆದ 10 ವರ್ಷಗಳಿಂದ ಸಾಧಿಸಿ ತೋರಿಸಿದ್ದಾರೆ. ಈ ಪರಂಪರೆ ಮುಂದುವರಿಯಲು ಈ ಬಾರಿ 400ಕ್ಕೂ ಅಧಿಕ ಸ್ಥಾನಗಳೊಂದಿಗೆ ಮತ್ತೆ ಮೋದಿ ಸರರಕಾರ ಬರಬೇಕಾಗಿದೆ ಎಂದು ಕ್ಯಾಪ್ಟನ್ ಕಾರ್ಣಿಕ್ ಪ್ರತಿಪಾದಿಸಿದರು.

ಮೋದಿ ಆಡಳಿತದಲ್ಲಿ ದೇಶಕ್ಕೆ ಹಿಂದೆಂದೂ ಕಂಡಿರದಷ್ಟು ಅಂತಾರಾಷ್ಟ್ರೀಯ ಮನ್ನಣೆ ದೊರೆತಿದ್ದು, ಜಗತ್ತಿನ ಆರ್ಥಿಕ ಹಿನ್ನಡೆಯ ನಡುವೆಯೂ ಆರ್ಥಿಕ ಭದ್ರತೆ, ಗಡಿ ಸುರಕ್ಷತೆ, ಆತ್ಮನಿರ್ಭರತೆಗಳನ್ನು ಸಾಧಿಸುತ್ತ ಬಂದಿದೆ. ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳ ನೇರ ವರ್ಗಾವಣೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ. ಹಿಂದೆಂದೂ ಕಂಡಿರಿಯದಷ್ಟು ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ವೈಜ್ಞಾನಿಕ, ತಾಂತ್ರಿಕ ಸಾಧನೆಗಳ ಮುನ್ನಡೆ ಆಗಿದೆ. ಈ ಕಾರಣಕ್ಕಾಗಿ ಪ್ರಧಾನಿ ಮೋದಿ ಅವರನ್ನು ದೇಶವು ಮತ್ತೊಮ್ಮೆ ಆಯ್ಕೆಮಾಡಬೇಕಾಗಿದೆ ಎಂದು ಕ್ಯಾ. ಕಾರ್ಣಿಕ್ ನುಡಿದರು.

ದೇಶ ವಿರೋಧಿ ಶಕ್ತಿಗಳಿಗೆ ಮಣೆ ಹಾಕಬೇಡಿ: ರಾಜಕೀಯ ಮುಖವಾಡದೊಂದಿಗೆ ದೇಶವಿರೋಧಿ ಶಕ್ತಿಗಳು ಮೇಲುಗೈ ಪಡೆಯಲು ನಾನಾ ರೂಪದಲ್ಲಿ ಹವಣಿಸುತ್ತಿರುವುದು ಎದ್ದು ಕಾಣುವಂತಿದೆ. ಅಧಿಕಾರಕ್ಕಾಗಿ ಮಿತಿಮೀರಿದ ತುಷ್ಟೀಕರಣ ಮತ್ತು ದೇಶ ವಿಭಜನೆಯ ಒಡಕು ಮಾತುಗಳೊಂದಿಗೆ ಹೀನ ರಾಜಕಾರಣ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳ ನಡೆ ಖಂಡನೀಯ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ, ಹನುಮಾನ್ ಚಾಲೀಸ ವಿರೋಧಿಸಿ ಮೂಲಭೂತವಾದಿಗಳು ನಡೆಸಿದ ಹಲ್ಲೆ ಮುಂತಾದ ಘಟನೆಗಳು ಕಾಂಗ್ರೆಸ್‌ನ ಅತಿರೇಕದ ತುಷ್ಟೀಕರಣಕ್ಕೆ ಜ್ವಲಂತ ಸಾಕ್ಷಿ ಎಂದು ಕಾರ್ಣಿಕ್ ವಿವರಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top