ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಪ್ಟನ್‌ ಬ್ರಿಜೇಶ್‌ ಚೌಟ ಮನವಿ.

109.2K Views 11 Apr 2024

ಮಂಗಳೂರು: ಮಂಗಳೂರಿನಲ್ಲಿ ಬಾನುವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್‌ ರೋಡ್‌ ಶೋ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಪ್ರಧಾನಿಯವರನ್ನು ಹತ್ತಿರದಿಂದ ಭೇಟಿ ಮಾಡುವ ಅವಕಾಶ ರೋಡ್ ಶೋ ಸಂದರ್ಭ ಸಿಗಲಿದ್ದು, ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಪ್ಟನ್‌ ಬ್ರಿಜೇಶ್‌ ಚೌಟ ಮನವಿ ಮಾಡಿದರು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ, ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಕಾರ್ಯಕರ್ತರ ಭೇಟಿಯ ಸಂದರ್ಭ ಸಿಗುವ ಸಲಹೆ, ಮೂಡುವ ಜನಾಭಿಪ್ರಾಯಗಳನ್ನು ಆಧರಿಸಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಇಚ್ಛೆ ಹೊಂದಿದ್ದೇನೆ. ಚುನಾವಣಾ ಪ್ರಚಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಕಾರ್ಯಕರ್ತರ ಉತ್ಸಾಹದಿಂದ ನನಗೆ ಹೆಚ್ಚಿನ ಬಲ ಬಂದಂತಾಗಿದೆ ಎಂದರು.
ಆರಂಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top