ಜನರ ಪ್ರಾಣವನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್‌ನ ಗ್ಯಾರಂಟಿ: ಕ್ಯಾಪ್ಟನ್ ಬ್ರಿಜೇಶ್ ಚೌಟ

114.7K Views 7 May 2024

ಮಂಗಳೂರು : ಜನರ ಜೀವ ಉಳಿಸಲು ಹಗಲಿರುಳು ದುಡಿಯುವ ಆಂಬ್ಯುಲೆನ್ಸ್ ಸಿಬ್ಬಂದಿಯ ಜೀವನಕ್ಕೆ ಗ್ಯಾರಂಟಿ ಇಲ್ಲದಿರುವುದು ದುರಂತ. ಸತತ ಮೂರು ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ಕೇವಲ ಪ್ರಚಾರಕಷ್ಟೇ ಸೀಮಿತವಾಗಿದೆಂದು ಬ್ರಿಜೇಶ್ ಚೌಟ ಹೇಳಿದ್ದಾರೆ. ಸಣ್ಣ ಸಮಸ್ಯೆಯಿಂದ ಸಂಬಳ ನೀಡುವಲ್ಲಿ ವಿಳಂಬವಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಆರೋಗ್ಯ ಸಚಿವರೇ, ಕನಿಷ್ಠ ಸಂಬಳಕ್ಕೆ ಜೀವದ ಹಂಗು ತೆರೆದು ಕೆಲಸ ಮಾಡುವ ಜೀವ ರಕ್ಷಕ ಆಂಬುಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದಿರುವುದು ಸಣ್ಣ ಸಮಸ್ಯೆ..? ನೀವು ಹೇಳುವಂತಹ ಸಣ್ಣ ಸಮಸ್ಯೆಯನ್ನು ಪರಿಹಾರ ಮಾಡಲು ಇಷ್ಟು ತಿಂಗಳಾದರೂ ಸಾಧ್ಯವಾಗದೇ ಇರುವಾಗ ನಿಮಗೆ ರಾಜ್ಯದ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹಾರ ಮಾಡಲು ಸಾಧ್ಯವಿದೆಯೇ?
ಆಂಬುಲೆನ್ಸ್ ಸೇವೆಯ ವ್ಯತ್ಯಾಯದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದರೆ ಅದರ ನೇರ ಹೊಣೆಯನ್ನು ಕಾಂಗ್ರೆಸ್ ಸರ್ಕಾರ ಹೊರಬೇಕಾಗುತ್ತದೆ. ಆಂಬುಲೆನ್ಸ್ ಸಿಬ್ಬಂದಿಗಳ ವೇತನವನ್ನು ಬಿಡುಗಡೆ ಮಾಡುವ ಮೂಲಕ ಮುಷ್ಕರವನ್ನು ಶೀಘ್ರವಾಗಿ ಹಿಂಪಡೆಯುವಂತೆ ನೋಡಿಕೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆಂದು ಬಿಜೆಪಿ ಪಕ್ಷದ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top