ಕರಾವಳಿ ಹಿಂದುತ್ವದ ಭದ್ರಕೋಟೆ : -ಹರೀಶ್ ಪೂಂಜ.

111.3K Views 4 Jun 2024

ಬೆಳ್ತಂಗಡಿ : ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ.
ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top